ದ.ಕ.ದಲ್ಲಿ 9 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; ಇಂದು 144 ಹೊಸ ಪ್ರಕರಣ ಪತ್ತೆ
Monday, August 17, 2020
(ಗಲ್ಫ್ ಕನ್ನಡಿಗ)ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಒಂಬತ್ತು ಸಾವಿರ ದಾಟಿದೆ. ಇಂದು 307 ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,022ಕ್ಕೆ ತಲುಪಿದೆ.
ಇಂದು ಪತ್ತೆಯಾದ ಸೋಂಕಿತರಲ್ಲಿ ತೀವ್ರ ಉಸಿರಾಟ ಸಮಸ್ಯೆ ಮತ್ತು ಶೀತ ಲಕ್ಷಣಗಳಿಂದ 76 ಮಂದಿಗೆ ಸೊಂಕು ದೃಢಪಟ್ಟಿದೆ.
(ಗಲ್ಫ್ ಕನ್ನಡಿಗ)ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 21ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 47 ಪ್ರಕರಣಗಳಲ್ಲಿ ಸೋಂಕು ತಗುಲಿರುವ ಮೂಲಗಳು ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2, 091 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಎಲ್ಲರೂ ವಿವಿಧ ಖಾಸಗಿ ಆಸ್ಪತ್ರೆ, ವೆನ್ಲಾಕ್ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
(ಗಲ್ಫ್ ಕನ್ನಡಿಗ)ಇವರಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆಗೆ ಒಳಗಾಗಿದ್ದ 13ಮಂದಿ, ಮನೆಗಳಲ್ಲೇ ಚಿಕಿತ್ಸೆ ಪಡೆದು 96 ಮಂದಿ, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ 100 ಮಂದಿ ಸೇರಿ ಇಂದು ಒಟ್ಟು 209 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿರುವವರ ಸಂಖ್ಯೆ 6,654ಕ್ಕೆ ತಲುಪಿದೆ.
(ಗಲ್ಫ್ ಕನ್ನಡಿಗ)