ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ. 9 ವರೆಗೆ ಆರೆಂಜ್ ಅಲರ್ಟ್
Tuesday, August 4, 2020
(ಗಲ್ಪ್ ಕನ್ನಡಿಗ)ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿರಂತರ ಭಾರಿ ಮಳೆ ಸುರಿಯುತ್ತಿರುವುದರಿಂದ ನದಿಗಳು ತುಂಬಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಗಲ್ಪ್ ಕನ್ನಡಿಗ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ)ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಷ್ಟ್ 3 ರಿಂದ ಆಗಷ್ಟ್ 9 ವರೆಗೆ ಆರೆಂಜ್ ಅಲರ್ಟ್ ನ್ನು ಹವಾಮಾನ ಇಲಾಖೆ ಘೋಷಿಸಿದೆ. ಈ ಸಂದರ್ಭದಲ್ಲಿ 64.5 ಮಿ. ಮೀ ನಿಂದ 115 ಮಿ. ಮೀ ವರೆಗೆ ಮಳೆ ಸುರಿಯುವ ಎಚ್ಚರಿಕೆಯನ್ನು ನೀಡಲಾಗಿದೆ. ಕಡಲಿನ ಅಬ್ಬರ ಈ ಸಂದರ್ಭದಲ್ಲಿ ಜಾಸ್ತಿಯಿದ್ದು ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ