ನಿರೀಕ್ಷೆಯಂತೆ ಬಿಜೆಪಿ ಸೇರಿದ ಮಾಜಿ ಐಪಿಎಸ್ ಆಫೀಸರ್ ಅಣ್ಣಾಮಲೈ
Tuesday, August 25, 2020
(ಗಲ್ಫ್ ಕನ್ನಡಿಗ)ಬೆಂಗಳೂರು: ಪೊಲೀಸ್ ಅಧಿಕಾರಿಯಾಗಿದ್ದಾಗ ಸಿಂಗಂ ಎಂದು ಕರೆಸಿಕೊಂಡಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಿರೀಕ್ಷೆಯಂತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ.
(ಗಲ್ಫ್ ಕನ್ನಡಿಗ)ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ ರಾವ್ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
(ಗಲ್ಫ್ ಕನ್ನಡಿಗ)ಉಡುಪಿ, ಚಿಕ್ಕಮಗಳೂರು ಎಸ್ ಪಿ ಯಾಗಿದ್ದ ಅಣ್ಣಾಮಲೈ ಅವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆ ಸಂದರ್ಭದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಮಾತುಗಳು ಕೇಳಿ ಬಂದಿತ್ತು. ಆದರೆ ಅವರು ಅದನ್ನು ನಿರಾಕರಿಸುತ್ತಾ ಬಂದಿದ್ದರು. ತಮಿಳುನಾಡಿನಲ್ಲಿ ಬಿಜೆಪಿಗೆ ಸಮರ್ಥ ನಾಯಕತ್ವದ ಕೊರತೆಯಿದ್ದು ಅದನ್ನು ಅಣ್ಣಾಮಲೈ ತುಂಬಲಿದ್ದಾರೆ ಎಂಬುದು ಬಿಜೆಪಿ ವರಿಷ್ಠರ ಲೆಕ್ಕಾಚಾರವಾಗಿದೆ.
(ಗಲ್ಫ್ ಕನ್ನಡಿಗ)