
ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
Tuesday, August 18, 2020
ಕಾರವಾರ : ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಹಾಗೂ ಆತ್ಮ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಸಕ್ತ ರೈತರು ಸೆಪ್ಟಂಬರ 7 ರೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಸಂಬಂಧಿಸಿದ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಹೊನ್ನಪ್ಪಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.