ಮಾಜಿ ಸಿಎಂ‌ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್


(ಗಲ್ಫ್ ಕನ್ನಡಿಗ) ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಕೊರೊನಾ ದೃಢಪಟ್ಟಿದೆ.

(ಗಲ್ಫ್ ಕನ್ನಡಿಗ) ಮೂತ್ರನಾಳದ ಸಮಸ್ಯೆ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಅವರು ಬೆಂಗಳೂರಿನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮುಖ್ಯಮಂತ್ರಿಗಳು ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ರಾತ್ರಿ ಅವರಿಗೆ ಜ್ವರದ ಲಕ್ಷಣವಿದ್ದು ಅವರ ಗಂಟಲುದ್ರವ ಪರೀಕ್ಷೆ ಮಾಡಲಾಗಿತ್ತು.

(ಗಲ್ಫ್ ಕನ್ನಡಿಗ) ಇಂದು ಬೆಳಿಗ್ಗೆ ಸಿದ್ದರಾಮಯ್ಯ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿ ದೃಢಪಡಿಸಿದ್ದಾರೆ.


(ಗಲ್ಫ್ ಕನ್ನಡಿಗ) ಸಿದ್ದರಾಮಯ್ಯ ಅವರು ಸಂಪರ್ಕದಲ್ಲಿದ್ದ ಇತರ ಕಾಂಗ್ರೆಸ್ ಮುಖಂಡರಿಗೂ ಕೊರೊನಾ ಭೀತಿ ಎದುರಾಗಿದೆ.

ಸಿದ್ದರಾಮಯ್ಯ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.

ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.