ಕೋವಿಡ್ ಕೇರ್ ಕೇಂದ್ರಗಳಿಗೆ ತಾಜಾ ಆಹಾರ ಒದಗಿಸಿ: ಜಿಲ್ಲಾ ಉಸ್ತುವಾರಿ ಸಚಿವಜೆ.ಸಿ.ಮಾಧುಸ್ವಾಮಿ.....
Monday, August 31, 2020
ಕೋವಿಡ್ ಕೇರ್ ಕೇಂದ್ರಗಳಿಗೆ ತಾಜಾ ಆಹಾರ ಒದಗಿಸಿ: ಜಿಲ್ಲಾ ಉಸ್ತುವಾರಿ ಸಚಿವ
ಜೆ.ಸಿ.ಮಾಧುಸ್ವಾಮಿ.....
(ಗಲ್ಫ್ ಕನ್ನಡಿಗ)ತುಮಕೂರು ಜಿಲ್ಲೆಯಲ್ಲಿರುವ
ಕೋವಿಡ್ ಕೇರ್ ಕೇಂದ್ರಗಳಲ್ಲಿ ಸೋಂಕಿತರಿಗೆ ತಾಜಾ ಆಹಾರ ಸೇರಿದಂತೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಸಣ್ಣ
ನೀರಾವರಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ
ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
(ಗಲ್ಫ್ ಕನ್ನಡಿಗ)ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಕೋವಿಡ್ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕ್ಯಾತಸಂದ್ರದಲ್ಲಿರುವ ಕೋವಿಡ್ ಕೇಂದ್ರವೂ ಸೇರಿದಂತೆಜಿಲ್ಲೆಯಲ್ಲಿರುವ ಕೇಂದ್ರಗಳಲ್ಲಿ ತಾಜಾ ಆಹಾರ, ಹೊದಿಕೆ ಮತ್ತಿತರ ಅಗತ್ಯ ಸೌಲಭ್ಯಗಳಲ್ಲಿ ವ್ಯತ್ಯಯವಾಗದಂತೆ ಪೂರೈಸಬೇಕು ಎಂದರು.
(ಗಲ್ಫ್ ಕನ್ನಡಿಗ)ವೈದ್ಯಕೀಯ ಸೌಲಭ್ಯ/ ಆಸ್ಪತ್ರೆಗಳು ಹತ್ತಿರ ಇರುವ ಹಾಗೂ ಸೌಕರ್ಯವಿರುವ ಸೋಂಕಿತರು ಬಯಸಿದ್ದಲ್ಲಿ ಹೋಮ್ ಐಸೋಲೇಷನ್‍ಗೆ ಅವಕಾಶ ನೀಡಿ ಎಂದು ಸೂಚಿಸಿದ ಸಚಿವರು, ಹೃದಯಾಘಾತ ಸೇರಿದಂತೆ ಕೋವಿಡೇತರ ಕಾರಣಗಳಿಂದ
ಮೃತಪಟ್ಟರೆ ಮೃತದೇಹಗಳನ್ನು ಕುಟುಂಬಸ್ಥರಿಗೆ ವಿಳಂಬ ಮಾಡದೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಿ ಎಂದು ಅವರು ನಿರ್ದೇಶನ ನೀಡಿದರು.
(ಗಲ್ಫ್ ಕನ್ನಡಿಗ)ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಕೇಂದ್ರಕ್ಕೆ ಆಗ್ಗಿಂದಾಗ್ಗೆ ಡಿಹೆಚ್‍ಓ ಅವರು ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಅಲ್ಲದೆ ಸೋಂಕಿತರ
ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ. ಉತ್ತಮ ತಾಜಾ ಆಹಾರವನ್ನು ಒದಗಿಸಲಾಗುತ್ತಿದೆ. ಅದೇ ಆಹಾರವನ್ನು ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಸೇವಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್
ಅವರು ತಿಳಿಸಿದರು.
(ಗಲ್ಫ್ ಕನ್ನಡಿಗ)ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ 144 ಸರ್ಕಾರಿ ಆಸ್ಪತ್ರೆಗಳು ಇದ್ದು, ರ್ಯಾಪಿಡ್ ಆ್ಯಂಟಿಜಿನ್ ಟೆಸ್ಟ್‌ಗಳನ್ನು ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ರೋಗಲಕ್ಷಣವನ್ನು ಆರಂಭದಲ್ಲಿ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಸೋಂಕು ಕಂಡು ಬಂದ ರೋಗಿಗಳಿಗೆ ಹೆಚ್ಚಿನ
ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
(ಗಲ್ಫ್ ಕನ್ನಡಿಗ)ಸೋಂಕಿತರು ತಡವಾಗಿ ಆಸ್ಪತ್ರೆಗಳಿಗೆ ಬರುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ
ಆಗಿರುವ ಹೆಚ್ಚಿನ ಕೊರೋನಾ ಸಾವಿನ ಪ್ರಕರಣಗಳು ಆಸ್ಪತ್ರೆಗೆ ವಿಳಂಬವಾಗಿ ಬಂದವರದಾಗಿವೆ. ಸೋಂಕಿತ ಲಕ್ಷಣಗಳು ಕಂಡು ಬಂದ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಆಗಮಿಸಿ ಸೂಕ್ತ
ಪರೀಕ್ಷೆ ಹಾಗೂ ಚಿಕಿತ್ಸೆ ಪಡೆದರೆ ಸಾವಿನ ಸಂಖ್ಯೆ ಕಡಿಮೆ ಮಾಡಬಹುದು ಎಂದು ಅವರು ಸಭೆಯಲ್ಲಿ ತಿಳಿಸಿದರು.
(ಗಲ್ಫ್ ಕನ್ನಡಿಗ)ತಾಲ್ಲೂಕು ಆಸ್ಪತ್ರೆಗಳಲ್ಲಿ ಹೈಪ್ಲೋ ಆಕ್ಸಿಜನ್ ಪೂರೈಕೆ ಮಾಡುವ ಸಿವಿಲ್ ಕಾಮಗಾರಿ ಪೂರ್ಣಗೊಂಡಿದ್ದು, ಆಕ್ಸಿಜನ್ ಪೂರೈಕೆ
ಅಳವಡಿಸುವ ಕಾರ್ಯ ಶೀಘ್ರವೇ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ ಆಕ್ಸಿಜನ್ ಸಿಲಿಂಡರ್‍ಗಳ ಪೂರೈಕೆಯಲ್ಲಿ ಕೊರತೆಯಿಲ್ಲ. ಅಲ್ಲದೆ ಅನುದಾನಕ್ಕೂ ಕೊರತೆ ಇಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ
ಕೊರೋನಾ ಸೋಂಕಿತರ ದಾಖಲಾತಿ ಸಂಬಂಧ ಕಂಟ್ರೋಲ್ ರೂಮ್‍ನ್ನು ಸ್ಥಾಪಿಸುತ್ತಿದ್ದು, ಇದಕ್ಕಾಗಿ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಅವರು ಹೇಳಿದರು.
(ಗಲ್ಫ್ ಕನ್ನಡಿಗ)ಸಭೆಯಲ್ಲಿ ಮಾತನಾಡಿದ ಡಿಹೆಚ್‍ಓ ಡಾ: ನಾಗೇಂದ್ರಪ್ಪ ಅವರು ಕೊರೋನಾ ಬಗ್ಗೆ ಮಾಹಿತಿ ನೀಡಿ ತುಮಕೂರು ನಗರದಲ್ಲಿ ಖಾಸಗಿ
ಆಸ್ಪತ್ರೆಗಳಿಂದ 694 ಹಾಸಿಗೆಗಳು ಲಭ್ಯವಾಗಲಿವೆ. ಇವರು ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಸಿದ್ಧರಿದ್ದಾರೆ. ಪ್ರತಿನಿತ್ಯ ಜಿಲ್ಲೆಯಲ್ಲಿ 1400
ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶಿರಾ ಕೆರೆಗೆ ನೀರು ಹರಿಸಿ :-
(ಗಲ್ಫ್ ಕನ್ನಡಿಗ)ಶಿರಾ ಪಟ್ಟಣದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇರುವುದರಿಂದ ಶಿರಾ
ಕೆರೆಗೆ ನೀರು ಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಇದೇ ಸಂದರ್ಭದಲ್ಲಿ ಹೇಮಾವತಿ ನಾಲಾ ಇಂಜಿನಿಯರ್‍ಗಳಿಗೆ ಸೂಚನೆ ನೀಡಿದರು. ಕಳೆದ ಬಾರಿಯೂ ಕಡಿಮೆ ನೀರನ್ನು ಹರಿಸಲಾಗಿದೆ. ಶಿರಾದಲ್ಲಿ ಕುಡಿಯುವ ನೀರು ಸಮಸ್ಯೆ ಇದ್ದು, ಕುಡಿಯುವ ನೀರಿಗೆ ಕೆರೆಗೆ
ನೀರು ಹರಿಸುವಂತೆ ಜನರು ಒತ್ತಾಯಿಸುತ್ತಿದ್ದಾರೆ. ವೇಳಾಪಟ್ಟಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಶಿರಾ ಕೆರೆಗೆ ನೀರು ಹರಿಸಬೇಕು ಎಂದರು.
(ಗಲ್ಫ್ ಕನ್ನಡಿಗ)ಬೆಂಗಳೂರಿನ ಟ್ರೀಟೇಡ್ ನೀರನ್ನು ಡಾಬಸ್‍ಪೇಟೆ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ಯೋಜನೆ ರೂಪಿಸಲಾಗುತ್ತಿದ್ದು, ತುಮಕೂರು ಗ್ರಾಮಾಂತರದ 8-10 ಕೆರೆಗಳಿಗೆ ಟ್ರಿಟೇಡ್ ನೀರು ಹರಿಸುವ ಸಂಬಂಧ ಕೆರೆಗಳ ಬಗ್ಗೆ
ಮಾಹಿತಿ ನೀಡಿ ಎಂದು ಇಂಜಿನಿಯರ್‍ಗಳಿಗೆ ಸೂಚಿಸಿದರು.
(ಗಲ್ಫ್ ಕನ್ನಡಿಗ)ಸಭೆಯಲ್ಲಿ ಜಿ.ಪಂ. ಸಿಇಓ ಶುಭಕಲ್ಯಾಣ್, ಅಪರ ಜಿಲ್ಲಾಧಿಕಾರಿ ಕೆ.
ಚೆನ್ನಬಸಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಉಪವಿಭಾಗಾಧಿಕಾರಿಗಳಾದ ಅಜಯ್, ಡಾ: ನಂದಿನಿದೇವಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ವೀರಭದ್ರಯ್ಯ, ಡಾ: ಚೇತನ್, ಸೇರಿದಂತೆ
ಆರೋಗ್ಯ ಮತ್ತು ನೀರಾವರಿ ಇಲಾಖೆಯ ಇಂಜಿನಿಯರ್‍ಗಳು ಹಾಜರಿದ್ದರು.