-->
ತುಮಕೂರಿನಲ್ಲಿ ಜೆಡಿಎಸ್ ವರಿಷ್ಟ ದೇವೇಗೌಡರಿಂದ ಪ್ರತಿಭಟನೆ..…
ಮಾರಕ ಕೊರೋನಾ ಸೋಂಕಿನ ಅಬ್ಬರದ ನಡುವೆಯೂ ಇಳಿ ವಯಸ್ಸಿನ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಭೂ ಸುಧಾರಣೆ ಕಾಯಿದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಿದರು.
ಸರ್ಕಾರದ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮೀಕ ಕಾಯ್ದೆಗಳ ವಿರುದ್ಧ ಜೆಡಿಎಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಸುಮಾರು 15 ನಿಮಿಷ ಜಿಲ್ಲಾಧಿಕಾರಿ ಕಚೇರಿ ಎದುರು ನಿಂತು ಮಾತನಾಡಿದರು. ತಿದ್ದುಪಡಿ ಕಾಯಿದೆಗಳನ್ನು ವಾಪಸ್ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಶಾಸಕ ಗೌರಿಶಂಕರ್ ಸೇರಿದಂತೆ ಜೆಡಿಎಸ್ ಮುಖಂಡರು ಹಾಜರಿದ್ದರು.