ಮೂಡುಬಿದಿರೆ: ಇಲ್ಲಿನ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈತ ರಂಗನಿರ್ದೇಶಕ ಜೀವನ್ ರಾಂ ಸುಳ್ಯ -ಡಾ. ಮೌಲ್ಯ ದಂಪತಿಗಳ ಪುತ್ರ.