ಮುಖ್ಯಮಂತ್ರಿ ಸಂಪರ್ಕದಲ್ಲಿದ್ದ ಸಚಿವ ಕೋಟ ವರದಿ ನೆಗೆಟಿವ್
(ಗಲ್ಪ್ ಕನ್ನಡಿಗ)ಉಡುಪಿ: ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇದ್ದ ಆತಂಕಕ್ಕೆ ತೆರೆ ಬಿದ್ದಿದೆ.
ಗಲ್ಪ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ)ಮುಖ್ಯಮಂತ್ರಿಗಳಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಕೋಟ ಶ್ರಿನಿವಾಸ ಪೂಜಾರಿ ಅವರಿಗೆ ಕೊರೊನಾ ಭೀತಿ ಇತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದ ಬೆನ್ನಿಗೆ ಸ್ವಯಂ ಕ್ವಾರಂಟೈನ್ ಆಗಿದ್ದರು.
(ಗಲ್ಪ್ ಕನ್ನಡಿಗ)ಈ ಕಾರಣದಿಂದ ಅವರ ಗಂಟಲು ದ್ರವ ಪರೀಕ್ಷೆಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ವರದಿ ಕೈಸೇರಿದ್ದು ನೆಗೆಟಿವ್ ಎಂದು ಬಂದಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿ ತಿಳಿಸಿದ್ದು " ಮಾನ್ಯ ಮುಖ್ಯಮಂತ್ರಿ ಯವರ ಸಂಪರ್ಕದಲ್ಲಿ ಇದ್ದ್ಎ ಎಂಬ ಕಾರಣಕ್ಕೆ ಇಂದಿನ ತನಕ ಹೋಂ ಕ್ವಾರಂಟೈನ್ ನಲ್ಲಿದ್ದೆ. ಇದೀಗ ಕೊರೊನಾ ಪರೀಕ್ಷೆ ಮಾಡಿದ್ದು ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಮತ್ತೆ ನನ್ನ ಕರ್ತವ್ಯಕ್ಕೆ ಹಾಜರಾಗುತ್ತೇನೆ. ತಮ್ಮೆಲ್ಲರ ಸಹಕಾರವಿರಲಿ ಎಂದಿದ್ದಾರೆ.
(ಗಲ್ಪ್ ಕನ್ನಡಿಗ)ವರದಿ ನೆಗೆಟಿವ್ ಬಂದ ಬಳಿಕ ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೂಮಿಪೂಜೆ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಉಡುಪಿ ಜಿಲ್ಲೆಯ ಕೋಟ ಶ್ರೀ ಅಮೃತೇಶ್ವರಿ ದೇವಸ್ತಾನಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನೆರವೇರಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ