ಕೊರೊನಾ ಆಸ್ಪತ್ರೆಯಲ್ಲಿ ಡ್ಯೂಟಿ; ಮೆಡಿಕಲ್ ಕಾಲೇಜು ಕಟ್ಟಡದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ


(ಗಲ್ಫ್ ಕ‌ನ್ನಡಿಗ)ಲಕ್ನೋ;  ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಕಿರುವ ಹಿನ್ನೆಲೆಯಲ್ಲಿ ಬೇಸರಗೊಂಡ ನರ್ಸಿಂಗ್ ವಿದ್ಯಾರ್ಥಿನಿ ಮೆಡಿಕಲ್ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

(ಗಲ್ಫ್ ಕ‌ನ್ನಡಿಗ)ಲಕ್ನೋದ  ವರುಣ್ ಅರ್ಜುನ್ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ನರ್ಸಿಂಗ್ ವಿದ್ಯಾರ್ಥಿನಿಯನ್ನು ಕೊರೊನಾ ರೋಗಿಗಳ ವಿಭಾಗಕ್ಕೆ ನೇಮಿಸಲಾಗಿತ್ತು . ಆದರೆ ವಿದ್ಯಾರ್ಥಿನಿ ಅಲ್ಲಿ ಕೆಲಸ ಮಾಡಲು ಸಿದ್ದರಿರಲಿಲ್ಲ.  ಆದ ಕಾರಣ ಆತ್ಮಹತ್ಯೆ ಗೆ ಯತ್ನಿಸಿದ್ದಾಳೆ. ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


(ಗಲ್ಫ್ ಕ‌ನ್ನಡಿಗ)ವಿದ್ಯಾರ್ಥಿನಿಯು ಇದಕ್ಕೂ ಮೊದಲು ವಿಡಿಯೊವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದರು.  ಕೊರೊನಾ ಆಸ್ಪತ್ರೆಯಲ್ಲಿ ಯಾವುದೇ ಸುರಕ್ಷತೆ ಇಲ್ಲದಿರುವುದರಿಂದ  ಅಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು  ಅಧಿಕಾರಿಗಳ ಮುಂದೆ ಮನವಿ ಮಾಡಿರುವುದು, ವೇತನ ಹೆಚ್ಚಿಸಲು ಒತ್ತಾಯಿಸಿರುವ  ಮತ್ತು ನಮ್ಮ ಮೇಲೆ ಮಾನಸಿಕ ಒತ್ತಡ ಹಾಕಲಾಗುತ್ತಿದೆ ಎಂದು ಆಪಾದಿಸಿದ್ದು ಈ ವಿಡಿಯೊ ಸಿಕ್ಕಾಪಟ್ಟೆ ವೈರಲ್ ಆಗಿದೆ
ವಿದ್ಯಾರ್ಥಿನಿ ಕುಟುಂಬಸ್ಥರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

(ಗಲ್ಫ್ ಕ‌ನ್ನಡಿಗ)