
ಈತ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲು ಬಳಸಿದ್ದು ಪ್ರಧಾನ ಮಂತ್ರಿ ಕಚೇರಿ ವಿಸಿಟಿಂಗ್ ಕಾರ್ಡ್!
Sunday, August 9, 2020
(ಗಲ್ಫ್ ಕನ್ನಡಿಗ)ಬೆಂಗಳೂರು; ಬೆಂಗಳೂರಿನಲ್ಲಿ ಐಷಾರಾಮಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿ ವಂಚಿಸಲು ಯತ್ನಿಸಿದ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
(ಗಲ್ಫ್ ಕನ್ನಡಿಗ)ಬೆಂಗಳೂರಿನ ಐಷಾರಾಮಿ ಹೋಟೆಲ್ ನಲ್ಲಿ ಉತ್ತರ ಪ್ರದೇಶ ಮೂಲದ ಅನಿಕೇತ್ ಬಂದು ವಾಸ್ತವ್ಯ ಹೂಡಿದ್ದಾನೆ. ಈತ ನ್ಯಾಷನಲ್ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾದ ಯೂತ್ ಅಡ್ವೈಸರ್ ಎಂದು ವಿಸಿಟಿಂಗ್ ಕಾರ್ಡ್ ತೋರಿಸಿ ವಾಸ್ತವ್ಯ ಹೂಡಿದ್ದ. ಜೂನ್ 16 ರಿಂದ 20 ವರೆಗೆ ಐಷಾರಾಮಿ ಹೋಟೆಲ್ ನಲ್ಲಿ ದಿನ ಕಳೆದಿದ್ದ.
(ಗಲ್ಫ್ ಕನ್ನಡಿಗ)ಈತನ ವರ್ತನೆ ಬಗ್ಗೆ ಅನುಮಾನಗೊಂಡ ಪೊಲೀಸರು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಪ್ರಧಾನಮಂತ್ರಿ ಕಚೇರಿಗೆ ಈತನ ಬಗ್ಗೆ ಬರೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಈತ ನಕಲಿ ವಿಸಿಟಿಂಗ್ ಕಾರ್ಡ್ ತೋರಿಸಿ ವಾಸ್ತವ್ಯ ಹೂಡಿದ್ದು ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರದ ಐಬಿ ಮತ್ತು ಎಫ್ ಆರ್ ಆರ್ ಐ ತಂಡ ಆರೋಪಿಯನ್ನು ತೀವ್ರ ವಿಚಾರಣೆ ನಡೆಸುತ್ತಿದೆ.