-->
ಕೆ.ಎಸ್. ತಿಮ್ಮಯ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೆ.ಎಸ್. ತಿಮ್ಮಯ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ





(ಗಲ್ಫ್ ಕನ್ನಡಿಗ)ಕಾರವಾರ : ಜಿಲ್ಲೆಯಲ್ಲಿ 2020-21ನೇ ಸಾಲಿನ ಎಸ್ ಎಸ್ ಎಲ್‍ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷೆಗಳಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮತ್ತು ಅವರ ಅವಲಂಭಿತರ ಹೆಣ್ಣು ಹಾಗೂ ಗಂಡು ಮಕ್ಕಳಿಗಾಗಿ “ಜನರಲ್ ಕೆ ಎಸ್ ತಿಮ್ಮಯ್ಯ” ನಗದು ಪ್ರಶಸ್ತಿಯನ್ನು ನೀಡಲಾಗುತ್ತಿದೆ.  
(ಗಲ್ಫ್ ಕನ್ನಡಿಗ)ಅರ್ಹ ಮಾಜಿ ಸೈನಿಕರ ಹಾಗೂ ಅವರ ಅಲಂಬಿತರ ಹೆಣ್ಣು ಹಾಗೂ ಗಂಡು ಮಕ್ಕಳು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು,  ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ 15 ರಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯಕ್ಕೆ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226538ನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Ads on article

Advertise in articles 1

advertising articles 2

Advertise under the article