-->

ಕೊರೊನಾ ಕಾಟ; ಮತ್ತೆ ಸೆಂಟ್ರಲ್ ಮಾರುಕಟ್ಟೆ ಬಂದ್!

ಕೊರೊನಾ ಕಾಟ; ಮತ್ತೆ ಸೆಂಟ್ರಲ್ ಮಾರುಕಟ್ಟೆ ಬಂದ್!


(ಗಲ್ಫ್ ಕನ್ನಡಿಗ)ಮಂಗಳೂರು: ಲಾಕ್​ಡೌನ್​ ಸಡಿಲಿಕೆ ಬಳಿಕ ನಗರದ ಸೆಂಟ್ರಲ್ ಮಾರುಕಟ್ಟೆಯಲ್ಲಿ ಆ.13ರಿಂದ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿತ್ತು‌. ಇದೀಗ ಮಾರುಕಟ್ಟೆ ತೆರೆದು ವಾರದೊಳಗೆ ಮುಂದಿನ ಆದೇಶದವರೆಗೆ ಮತ್ತೆ ಮಾರುಕಟ್ಟೆ ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

(ಗಲ್ಫ್ ಕನ್ನಡಿಗ)ಕೊರೊನಾ ಪ್ರಕರಣಗಳನ್ನು ನಿಯಂತ್ರಣಕ್ಕೆ ‌ತರುವ ಉದ್ದೇಶದಿಂದ ದ.ಕ.ಜಿಲ್ಲಾಡಳಿತ ಸೆಂಟ್ರಲ್ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣ ನೀಡಿ ಅಲ್ಪಕಾಲದವರೆಗೆ ಎಪಿಎಂಸಿ ಯಾರ್ಡ್ ಗೆ ಸ್ಥಳಾಂತರ ಮಾಡಲಾಗಿತ್ತು. ಆದರೆ ಆ ಬಳಿಕ ಮಾರುಕಟ್ಟೆ ಸಂಪೂರ್ಣ ಶಿಥಿಲಗೊಂಡಿದ್ದು, ಸ್ಮಾರ್ಟ್ ಸಿಟಿಯಡಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗುತ್ತದೆ. ಆದ್ದರಿಂದ ಸೆಂಟ್ರಲ್ ಮಾರುಕಟ್ಟೆ ಪೂರ್ತಿ ನಿರ್ಮಾಣ ಆಗುವವರೆಗೆ ಸೆಂಟ್ರಲ್ ಮಾರುಕಟ್ಟೆ ಸಂಪೂರ್ಣ ಎಪಿಎಂಸಿಯಲ್ಲಿ ಕಾರ್ಯಾಚರಿಸುವಂತೆ ಆದೇಶಿಸಲಾಯಿತು.

(ಗಲ್ಫ್ ಕನ್ನಡಿಗ)ಸೆಂಟ್ರಲ್ ಮಾರುಕಟ್ಟೆಯನ್ನು  ಐದು ತಿಂಗಳಾದರೂ ಮತ್ತೆ ತೆರೆಯದ ಹಿನ್ನೆಲೆಯಲ್ಲಿ ತಮಗೆ ಮತ್ತೆ ಸೆಂಟ್ರಲ್ ಮಾರುಕಟ್ಟೆಯಲ್ಲಿ ಮತ್ತೆ ವ್ಯಾಪಾರ ನಡೆಸಲು ಅನುವು ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಎಪಿಎಂಸಿ ಹೊರತುಪಡಿಸಿ ಬದಲಿ ವ್ಯವಸ್ಥೆ ಮಾಡಬೇಕೆಂದು ವರ್ತಕರು ಕೋರ್ಟ್ ಮೆಟ್ಟಲು ಹತ್ತಿದ್ದರು. ಈ ನಡುವೆ ಮಂಗಳೂರು ಮನಪಾ ವರ್ತಕರು ಸೆಂಟ್ರಲ್ ಮಾರುಕಟ್ಟೆಯಲ್ಲಿ ಮತ್ತೆ ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ತಡೆ ನೀಡಿರುವ ಕೋರ್ಟ್ ಆದೇಶವನ್ನು ಹಿಂಪಡೆದು ಆ.13 ರಿಂದ ವ್ಯಾಪಾರ ನಡೆಸಲು ಅನುವು ಮಾಡಿತ್ತು.


(ಗಲ್ಫ್ ಕನ್ನಡಿಗ)ಇದಾಗಿ ಒಂದೇ ವಾರದಲ್ಲಿ ಮಾರುಕಟ್ಟೆಯಲ್ಲಿ ಕೆಲಸ ಮಾಡುವಂತಹ ಬೆರಳೆಣಿಕೆಯಷ್ಟು ಮಾಲೀಕರು, ಕೂಲಿ ಕಾರ್ಮಿಕರು ಮತ್ತು ಗ್ರಾಹಕರು ಮಾಸ್ಕ್ ಧರಿಸಿ ಓಡಾಡುತ್ತಿದ್ದಾರೆ. ಜೊತೆಗೆ ಮಾರುಕಟ್ಟೆಯಲ್ಲಿರುವ ಮಾಂಸದ ಅಂಗಡಿಗಳಿಗೆ ಸಮರ್ಪಕವಾದ ವ್ಯವಸ್ಥೆ ಇಲ್ಲದಿರುವುದರಿಂದ ಶುಚಿತ್ವ ಕಾಪಾಡುವುದು ಕಷ್ಟಕರವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದನ್ನು ತಡೆಗಟ್ಟುವುದು ಅತ್ಯಂತ ಅಗತ್ಯವಾಗಿದೆ. ಈ ಮೂಲಕ ಕೇಂದ್ರ ಮಾರುಕಟ್ಟೆ ಸುತ್ತಮುತ್ತ ಹೆಚ್ಚಿನ ಜನರು ಸೇರದಂತೆ ಕ್ರಮ ವಹಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ಮತ್ತೆ ಮಾರುಕಟ್ಟೆಯನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿದೆ.

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99