ಕೊರೊನಾ ಗೆದ್ದ ಸಿಎಂ ಯಡಿಯೂರಪ್ಪ; ಆಸ್ಪತ್ರೆಯಿಂದ ಡಿಸ್ಚಾರ್ಜ್
Monday, August 10, 2020
(ಗಲ್ಫ್ ಕನ್ನಡಿಗ)ಬೆಂಗಳೂರು; ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಗುಣಮುಖರಾಗಿದ್ದಾರೆ.
(ಗಲ್ಫ್ ಕನ್ನಡಿಗ)ಗುಣಮುಖರಾದ ಹಿನ್ನೆಲೆಯಲ್ಲಿ ಇಂದು ಸಂಜೆ ಮಣಿಪಾಲ ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ.
(ಗಲ್ಫ್ ಕನ್ನಡಿಗ) ಮುಖ್ಯಮಂತ್ರಿಗಳು ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದಾಗ ಎರಡು ಬಾರಿ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಇಂದು ಬೆಳಿಗ್ಗೆ ಅವರ ಗಂಟಲುದ್ರವದ ವರದಿ ನೆಗೆಟಿವ್ ಬಂದಿದೆ.
(ಗಲ್ಫ್ ಕನ್ನಡಿಗ)ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ. ಆ.16 ವರೆಗೆ ಸಿಎಂ ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ.
(ಗಲ್ಫ್ ಕನ್ನಡಿಗ)