-->

ಮುಂಗಾರು ಬೆಳೆ ಸಮೀಕ್ಷೆ-ಬೆಳೆ ಮಾಹಿತಿ ನೀಡಲು ಅವಕಾಶ

ಮುಂಗಾರು ಬೆಳೆ ಸಮೀಕ್ಷೆ-ಬೆಳೆ ಮಾಹಿತಿ ನೀಡಲು ಅವಕಾಶ


(
ಗಲ್ಪ್ ಕನ್ನಡಿಗ)ಮಂಗಳೂರು :- 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆಗಸ್ಟ್ 10 ರಿಂದ ಜಿಲ್ಲೆಯಾದ್ಯಂತ ಆರಂಭವಾಗುತ್ತಿದೆ. ಎಲ್ಲಾ ಹಂಗಾಮುಗಳಲ್ಲಿ ರೈತರೇ ತಮ್ಮ ಜಮೀನುಗಳಲ್ಲಿನ ಬೆಳೆ ಮಾಹಿತಿಯನ್ನು ಛಾಯಾಚಿತ್ರ ಸಹಿತ ದಾಖಲಿಸಿ ಬೆಳೆ ಸಮೀಕ್ಷೆ app ಲ್ಲಿ ಅಪ್‍ಲೋಡ್ ಮಾಡಲು ಅಗಸ್ಟ್ 10 ರಿಂದ 24ರ ವರೆಗೆ ಸರಕಾರ ಅವಕಾಶ ಕಲ್ಪಿಸಿದೆ.
   (
ಗಲ್ಪ್ ಕನ್ನಡಿಗ) ಪ್ಲೇ ಸ್ಟೋರ್‍ ನಿಂದ Farmers crop survey app 2020-21, ಲಿಂಕ್   https://play.google.com/store/apps/details?id=com.csk.KariffTPKfarmer.cropsurvey (ಫಾರ್ಮರ್ ಕ್ರಾಪ್ ಸರ್ವೇ ಆ್ಯಪ್ 2020-21) ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬೇಕು. ಅಥವಾ ರೈತರು ಸ್ವತಂತ್ರವಾಗಿ ಅಪ್‍ಲೋಡ್ ಮಾಡಲು ಸಾಧ್ಯವಾಗದಿದ್ದಲ್ಲಿ ಖಾಸಗಿ ನಿವಾಸಿಗಳ ಅಥವಾ ಕೃಷಿ ಇಲಾಖೆಯ ಅಧಿಕಾರಿಗಳ ಸಹಾಯ ಪಡೆದುಕೊಳ್ಳಬಹುದು.   ಈ ಬೆಳೆ ಮಾಹಿತಿ ಆಧಾರದ ಮೇಲೆ ಕನಿಷ್ಠ ಬೆಂಬಲ ನಿಗದಿ, ಬೆಳೆ ಪರಿಹಾರ - ಬೆಳೆ ವಿಮಾ ಯೋಜನೆ, ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್. ಅಡಿಯಲ್ಲಿ ಸಹಾಯಧನ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ, ಹಾನಿಗೊಳಗಾದ ಬೆಳೆ ವಿಸ್ತೀರ್ಣದ ವಿವರ, ಅರ್ಹ ಫಲಾನುಭವಿಗಳನ್ನು ಗುರುತಿಸಲಾಗುವುದು. ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ಇತ್ಯಾದಿ ದಾಖಲಾತಿಗಳನ್ನು ಈ ಸಮೀಕ್ಷಾ ವರದಿ ಆಧರಿಸಿ ನಡೆಸಲಾಗುತ್ತದೆ. ಬೆಳೆ ವಿವರಗಳನ್ನು ಅಪ್‍ಲೋಡ್ ಮಾಡದಿದ್ದಲ್ಲಿ ಇಲಾಖೆಯಿಂದ ದೊರೆಯುವ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.


(
ಗಲ್ಪ್ ಕನ್ನಡಿಗ)ಹೆಚ್ಚಿನ ವಿವರಗಳಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ದ.ಕ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99