ಕಡಬದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ


(ಗಲ್ಫ್ ಕನ್ನಡಿಗ)ಮಂಗಳೂರು; ಕಡಬದ  ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಪಾರ ನಷ್ಟ ಸಂಭವಿಸಿದೆ.

(ಗಲ್ಫ್ ಕನ್ನಡಿಗ)ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಬಲ್ಯ ಗ್ರಾಮದಲ್ಲಿ ಈ ಘಟನೆ  ನಡೆದಿದೆ. ಗ್ರಾಮದ ಕೆರೆನಡ್ಕ ದರ್ಣಪ್ಪ‌ ಗೌಡ ಎಂಬುವರ ಮನೆಯಲ್ಲಿ   ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ.
 

 (ಗಲ್ಫ್ ಕನ್ನಡಿಗ)ಘಟನೆಯಿಂದ ಮನೆಯ ಛಾವಣಿ ಭಾಗಶಃ ಹಾನಿಯಾಗಿದ್ದು ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕೋಣೆಯಲ್ಲಿದ್ದ  ಸಾಮಾಗ್ರಿಗಳಿಗೂ ಹಾನಿಯಾಗಿದೆ. 

(ಗಲ್ಫ್ ಕನ್ನಡಿಗ)ಅದೃಷ್ಟವಶಾತ್ ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದ ಗ್ಯಾಸ್ ಏಜೆನ್ಸಿಯವರು ಸ್ಥಳಕ್ಕೆ ಧಾವಿಸಿ, ಹೊಸ ಗ್ಯಾಸ್ ಕನೆಕ್ಷನ್ ನೀಡಿದ್ದಾರೆ. ಅಲ್ಲದೇ ಸ್ಥಳ ಸಮೀಕ್ಷೆ ನಡೆಸಿ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ.