
ಬಿಗ್ ಹಿಟ್ಟರ್, ಗ್ರೇಟ್ ಫಿನಿಷರ್, ಕೂಲ್ ಕ್ಯಾಪ್ಟನ್ ಎಂ.ಎಸ್. ಧೋನಿ ವರ್ಣರಂಜಿತ ಕ್ರಿಕೆಟ್ ಬದುಕಿಗೆ ತೆರೆ
Saturday, August 15, 2020
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ನಿವೃತ್ತಿ
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ್ದಾರೆ.
ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ: ಭಾರತೀಯ ಕ್ರಿಕೆಟ್ ರಂಗಕ್ಕೆ ಹೊಸ ಮೆರುಗು ನೀಡಿದ ಕೂಲ್ ಕ್ಯಾಪ್ಟನ್, ಗ್ರೇಟ್ ಫಿನಿಶರ್ ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.
2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2008ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಕ್ರಿಕೆಟ್ ರಂಗದಲ್ಲಿ ತನ್ನ ಪಾರಮ್ಯವನ್ನು ಮೆರೆದಿತ್ತು.
ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.