-->
ಡಿಪ್ಲೊಮಾ ಪ್ರವೇಶ–ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಡಿಪ್ಲೊಮಾ ಪ್ರವೇಶ–ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


(ಗಲ್ಪ್‌ ಕನ್ನಡಿಗ)ಮಂಗಳೂರು :- ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು, ಇಲ್ಲಿಗೆ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ https://dtetech.karnataka.gov.in/kartechnical, ಮತ್ತು www.cetonline.karnataka.gov.in/kea/ ಗಳ ಮೂಲಕ ಪ್ರಚುರಪಡಿಸುವ ಮಾಹಿತಿ ಪುಸ್ತಕದಲ್ಲಿರುವ ಸೂಚನೆಗಳನ್ವಯ ತಮಗೆ ಹತ್ತಿರದ ಸರ್ಕಾರಿ/ಅನುದಾನಿತ ಪಾಲಿಟೆಕ್ನಿಕ್‍ಗಳ ಸಹಾಯ ಕೇಂದ್ರಗಳಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಾತಿಯನ್ನು ಆನ್-ಲೈನ್ ನಾನ್ ಇಂಟರಾಕ್ಟಿವ್ ಕೌನ್ಸಿಲ್ (ಆನ್‍ಲೈನ್ ಆಪ್ಷನ್ ಎಂಟ್ರಿ) ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಆಗಸ್ಟ್ 29 ರಂದು ಸಂಜೆ 5 ಗಂಟೆವರೆಗೆ ವಿಸ್ತರಿಸಲಾಗಿದೆ.
     

(ಗಲ್ಪ್‌ ಕನ್ನಡಿಗ)ಅಭ್ಯರ್ಥಿಗಳು ಅರ್ಜಿಯೊಂದಿಗೆ ವಿವಿಧ ಪ್ರವರ್ಗಗಳ ವಿಶೇಷ ಮೀಸಲಾತಿಯಡಿ ಸಂಬಂಧಪಟ್ಟ ದೃಢೀಕೃತ ದಾಖಲೆಗಳನ್ನು ಅಪ್‍ಲೋಡ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.  ಪ್ರವೇಶ ಪಡೆಯುವ ಪಾಲಿಟೆಕ್ನಿಕ್‍ಗಳಲ್ಲಿ ಪ್ರವೇಶ ಶುಲ್ಕ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಬೇಕು.
     

(ಗಲ್ಪ್‌ ಕನ್ನಡಿಗ)ಡಿಪ್ಲೊಮಾ ಪ್ರವೇಶ ಪ್ರಕ್ರಿಯೆಯ ಅಧಿಸೂಚನೆ ಮತ್ತು ವೇಳಾಪಟ್ಟಿಯನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಿಂದ ಪಡೆಯಬಹುದು.  
   ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸಂಖ್ಯೆ: 0824-2211636ನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರ ಕಚೇರಿಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.



 

Ads on article

Advertise in articles 1

advertising articles 2

Advertise under the article