-->

DySP ಗಣಪತಿ ಆತ್ಮಹತ್ಯೆ ಪ್ರಕರಣ: ಬಿ ರಿಪೋರ್ಟ್ ರದ್ದುಗೊಳಿಸಿದ ಕೋರ್ಟ್‌, ಮಾಜಿ ಸಚಿವ ಜಾರ್ಜ್‌ಗೆ ನೋಟೀಸ್

DySP ಗಣಪತಿ ಆತ್ಮಹತ್ಯೆ ಪ್ರಕರಣ: ಬಿ ರಿಪೋರ್ಟ್ ರದ್ದುಗೊಳಿಸಿದ ಕೋರ್ಟ್‌, ಮಾಜಿ ಸಚಿವ ಜಾರ್ಜ್‌ಗೆ ನೋಟೀಸ್


ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ

CBI 'ಬಿ' ರಿಪೋರ್ಟ್‌ ರದ್ದುಗೊಳಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು: ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ್ದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿದ್ದು, ಮಾಜಿ ಸಚಿವ ಕೆ.ಜೆ.. ಜಾರ್ಜ್‌ಗೆ ನೋಟೀಸ್ ಜಾರಿಗೊಳಿಸಲಾಗಿದೆ.

ಹಿಂದಿನ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಮರುಜೀವ ಪಡೆದುಕೊಂಡಿರುವುದು ರಾಜಕೀಯ ವಲಯದಲ್ಲೂ ಸಂಚನ ಮೂಡಿಸಿದೆ.

ಈ ಮೂಲಕ ಐಪಿಎಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ, ಎ.ಎಂ. ಪ್ರಸಾದ್‌ ಸಹಿತ ಹಲವರಿಗೆ ಮತ್ತೂಮ್ಮೆ ತನಿಖೆಯ ಉರುಳು ಸುತ್ತಿಕೊಂಡಿದೆ. ಈಗಾಗಲೇ "ಕ್ಲೀನ್‌ ಚಿಟ್‌" ಪಡೆದಿದ್ದ ಈ ಮೂವರು ಆರೋಪಿಗಳಿಗೆ ಈಗ ಮತ್ತೂಮ್ಮೆ ತನಿಖೆ ಎದುರಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.

ಪ್ರಕರಣದ ತನಿಖೆ ನಡೆಸಿ ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ ಪ್ರಶ್ನಿಸಿ ಮೃತ ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಮತ್ತು ಕುಟುಂಬದ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ‘ಬಿ’ ರಿಪೋರ್ಟ್‌ ರದ್ದುಪಡಿಸಿ, ಪ್ರಕರಣದ ಮರು ತನಿಖೆಗೆ ಸೂಚಿಸಿದ್ದಾರೆ.

ಈ ಸಂಬಂಧ ಕೆ.ಜೆ. ಜಾರ್ಜ್‌, ಪ್ರಣವ್‌ ಮೊಹಾಂತಿ, ಎ.ಎಂ. ಪ್ರಸಾದ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿರುವ ನ್ಯಾಯಾಲಯವು, ಸೆ. 28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅರ್ಜಿದಾರರ ಪರ ವಕೀಲ ಪವನ್‌ಚಂದ್ರ ಶೆಟ್ಟಿ ವಾದ ಮಂಡಿಸಿದರು.

ಮಡಿಕೇರಿಯ ಡಿವೈಎಸ್ಪಿ ಆಗಿದ್ದ ಗಣಪತಿ 2016ರ ಜು. 7ರಂದು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಮುನ್ನ ಟಿ.ವಿ. ಸಂದರ್ಶನದಲ್ಲಿ ತನ್ನ ಸಾವಿಗೆ ಅಂದಿನ ಗೃಹ ಸಚಿವ ಕೆ.ಜೆ. ಜಾರ್ಜ್‌, ಹಿರಿಯ ಐಪಿಎಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ, ಎ.ಎಂ. ಪ್ರಸಾದ್‌ ಕಾರಣ ಎಂದು ಆರೋಪಿಸಿದ್ದರು. ಈ ಪ್ರಕರಣ ತೀವ್ರ ಸ್ವರೂಪ ಪಡೆದು ಜಾರ್ಜ್‌ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರು.

ನ್ಯಾಯಾಂಗ ತನಿಖಾ ಹಂತದಲ್ಲಿಯೇ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಕುಟುಂಬಸ್ಥರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಸಿಬಿಐ ತನಿಖೆಗೆ ಆದೇಶಿಸಿತ್ತು.

ಹೀಗಾಗಿ ಜಾರ್ಜ್‌ ಸಹಿತ ಮೂವರ ವಿರುದ್ಧವೂ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸಿಬಿಐ, ಅಂತಿಮವಾಗಿ ಗಣಪತಿ ಅವರ ಸಾವಿಗೆ ಜಾರ್ಜ್‌, ಮೊಹಾಂತಿ, ಎ.ಎಂ. ಪ್ರಸಾದ್‌ ಕಾರಣರಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಈ ಸಂಬಂಧ ಕಳೆದ ವರ್ಷ ನ್ಯಾಯಾಲಯಕ್ಕೆ “ಬಿ’ ರಿಪೋರ್ಟ್‌ ಸಲ್ಲಿಸಲಾಗಿತ್ತು. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99