ಗೋಶಾಲೆಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Thursday, August 6, 2020
(ಗಲ್ಪ್ ಕನ್ನಡಿಗ)ಮಂಗಳೂರು :- ಮೈಸೂರಿನ ಪಿಂಜರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಗೋಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
(ಗಲ್ಪ್ ಕನ್ನಡಿಗ)ಟ್ರಸ್ಟ್ ರಚನೆಯಾಗಿ ಒಂದು ವರ್ಷ ಪೂರ್ಣಗೊಳಿಸಿರುವ ಮತ್ತು 50 ಕ್ಕಿಂತ ಹೆಚ್ಚಿನ ಜಾನುವಾರುಗಳನ್ನು ಸಾಕಾಣಿಕೆ ಮಾಡುತ್ತಿರುವ ಗೋಶಾಲೆಯವರು ಸಹಾಯಧನ ಕೋರಿ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ತಾಲ್ಲೂಕಿನ ಪಶು ಅಸ್ಪತ್ರೆ ಅಥವಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳಬಹುದು. ಹಾಗೂ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 20 ರೊಳಗೆ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
(ಗಲ್ಪ್ ಕನ್ನಡಿಗ)ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ದ.,ಕ ಮಂಗಳೂರು ದೂರವಾಣಿ ಸಂಖ್ಯೆ 0824-2492337 ಅಥವಾ ತಾಲ್ಲೂಕು ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ದ.ಕ. ಜಿಲ್ಲಾ ಪಶುಪಾಲನಾ ಇಲಾಖೆಯ ಉಪನಿರ್ದೇಶಕ (ಆಡಳಿತ) ರ ಪ್ರಕಟಣೆ ತಿಳಿಸಿದೆ.