-->
ads hereindex.jpg
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ : ಗುರುವಾರ  ಸಭೆ, ಹಾಲುಮತ ಸಮಾಜದ ಮುಖಂಡರ ಜತೆ ಚರ್ಚಿಸಿ ನಿರ್ಧಾರ - ಸಚಿವ ರಮೇಶ್ ಜಾರಕಿಹೊಳಿ

ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ : ಗುರುವಾರ ಸಭೆ, ಹಾಲುಮತ ಸಮಾಜದ ಮುಖಂಡರ ಜತೆ ಚರ್ಚಿಸಿ ನಿರ್ಧಾರ - ಸಚಿವ ರಮೇಶ್ ಜಾರಕಿಹೊಳಿ


(ಗಲ್ಫ್ ಕನ್ನಡಿಗ): ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಹಾಲುಮತ ಸಮಾಜದ ಮುಖಂಡರು ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯನ್ನು ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

(ಗಲ್ಫ್ ಕನ್ನಡಿಗ)ಈ ವಿಷಯಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಂಜೆ ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆಯನ್ನು ಅವರು ನಡೆಸಿದರು.

(ಗಲ್ಫ್ ಕನ್ನಡಿಗ)ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಬೇಕು ಎಂಬ ಬೇಡಿಕೆಯ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿಯನ್ನು ಸಚಿವರು‌ ಪಡೆದುಕೊಂಡರು.


ಗುರುವಾರ(ಆ.27) ಸಭೆ:

(ಗಲ್ಫ್ ಕನ್ನಡಿಗ)ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಹಾಲುಮತ(ಕುರುಬ) ಸಮಾಜದ ಮುಖಂಡರು ಹಾಗೂ ಸಂಘಟನೆಗಳ ಪದಾಧಿಕಾರಿಗಳ ಸಭೆಯನ್ನು ಗುರುವಾರ(ಆ.26) ಬೆಳಿಗ್ಗೆ11 ಗಂಟೆಗೆ ಕರೆಯಲಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

(ಗಲ್ಫ್ ಕನ್ನಡಿಗ)ಸಮಾಜದ ಮುಖಂಡರ ಜತೆ ಕೂಲಂಕುಷವಾಗಿ ಚರ್ಚೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

(ಗಲ್ಫ್ ಕನ್ನಡಿಗ)ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತರಾದ ಟಿ.ತ್ಯಾಗರಾಜನ್ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2