ಬಿಜೆಪಿ ದ.ಕ ಜಿಲ್ಲಾಧ್ಯಕ್ಷರ ತಾಯಿ ಹೃದಯಾಘಾತದಿಂದ ನಿಧನ


(ಗಲ್ಫ್ ಕನ್ನಡಿಗ)ಮಂಗಳೂರು; ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ತಾಯಿ ಕಸ್ತೂರಿ (63) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.


(ಗಲ್ಫ್ ಕನ್ನಡಿಗ)ಮೂಡಬಿದ್ರೆ ಸ್ವರಾಜ್ ಮೈದಾನ  ಬಳಿಯ ಮನೆಯಲ್ಲಿ ಇಂದು ಬೆಳಿಗ್ಗೆ  ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಅಲಂಗಾರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿಮಧ್ಯೆ ಮೃತಪಟ್ಟಿದ್ದಾರೆ. 

(ಗಲ್ಫ್ ಕನ್ನಡಿಗ) ಅವರು ಮೂಡಬಿದ್ರೆ ಪುರಸಭೆಯ ಮಾಜಿ ಸದಸ್ಯೆಯು ಆಗಿದ್ದಾರೆ.  ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸಹಿತ ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ.

(ಗಲ್ಫ್ ಕನ್ನಡಿಗ)