ಕೆಳದಂಡೆ ಮುಲ್ಲಾಮಾರಿ ಯೋಜನೆಯ ಆಣೆಕಟ್ಟಿನಿಂದ ನದಿಗೆ ನೀರು ಬಿಡುಗಡೆ: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ
Thursday, August 6, 2020
ಗಲ್ಪ್ ಕನ್ನಡಿಗಕಲಬುರಗಿ:-ಕೆಳದಂಡೆ ಮುಲ್ಲಾಮಾರಿ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯಾಗಿ ಗರಿಷ್ಟ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿಯ ಮುಖಾಂತರ ಸುಮಾರು 1000 ಕ್ಯೂಸೆಕ್ಸ್ ನೀರನ್ನು ನದಿ ಪಾತಳಿಗೆ ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಐಪಿಸಿ ವಿಭಾಗ ನಂ.1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಗಲ್ಪ್ ಕನ್ನಡಿಗಸಧ್ಯದ ಸ್ಥಿತಿಯಲ್ಲಿ ಜಲಾನಯನ ಪ್ರದೇಶದಲ್ಲಿ ಇನ್ನೂ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದ್ದು, ಹರಿದು ಬಂದ ಹೆಚ್ಚಿನ ಪ್ರಮಾಣದ ನೀರನ್ನು ಯಾವುದೇ ಮುನ್ಸೂಚನೆ ನೀಡದೆ ನದಿ ಪಾತಾಳಿಗೆ ಬಿಡಲಾಗುತ್ತದೆ. ಆದ್ದರಿಂದ ನದಿ ಅಕ್ಕ ಪಕ್ಕದ ರೈತರು/ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿಗಳನ್ನು ಹಾಗೂ ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೆ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.