-->
ads hereindex.jpg
ಸಚಿವ ಕೋಟ ದೆಹಲಿಯಲ್ಲಿ; ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭೇಟಿ

ಸಚಿವ ಕೋಟ ದೆಹಲಿಯಲ್ಲಿ; ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭೇಟಿ


ಕರ್ನಾಟಕ ರಾಜ್ಯದ ವಿವಿಧ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಕುರಿತು ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿಯವರಿಂದು ಕೇಂದ್ರ ಕೃಷಿ ಸಚಿವರಾದ  ನರೇಂದ್ರ ಸಿಂಗ್ ತೋಮರ್‍ರವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.

ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ, ಕಾರವಾರದ ಮಾವಾಳಿ ಹಾಗೂ ಮಂಗಳೂರಿನ ಬೈಕಂಪಾಡಿಯಲ್ಲಿ ಸಂಯೋಜಿತ ಸೀ ಫುಡ್ ಪಾರ್ಕ್ ಯೋಜನೆಗಳು.
ರಾಜ್ಯ ಕರಾವಳಿಯ 8 ಮೀನುಗಾರಿಕಾ ಹಾರ್ಬರ್‍ಗಳ ಆಧುನೀಕರಣ ಹಾಗೂ 16 ಕಡೆಗಳಲ್ಲಿ ಮೀನುಗಾರಿಕಾ ಇಳಿದುದಾಣಗಳ ಉನ್ನತೀಕರಣ ಸೇರಿದಂತೆ, ವಿವಿಧ ಯೋಜನೆಗಳಿಗೆ ಕೇಂದ್ರ ಕೃಷಿ ಸಚಿವ  ನರೇಂದ್ರ ಸಿಂಗ್ ತೋಮರ್‍ರವರನ್ನು ದೆಹಲಿಯಲ್ಲಿ ಸಚಿವ ಕೋಟ ಭೇಟಿ ಮಾಡಿ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು.

ಯೋಜನಾ ವರದಿಗಳನ್ನು  ಪರಿಶೀಲಿಸಿದ ಸಚಿವರು, ಧನಾತ್ಮಕವಾಗಿ ಸ್ಪಂದಿಸಿದರು. ಯೋಜನೆಗಳನ್ನು ಶೀಘ್ರವಾಗಿ ಅನುಷ್ಟಾನ ಮಾಡುವಂತೆ ಹಾಗೂ ಪ್ರಧಾನ ಮಂತ್ರಿಯವರ ಆತ್ಮ ನಿರ್ಭರ ಭಾರತ ಯೋಜನೆಯನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ RKVY ಮುಖಾಂತರ  ಯೋಜನೆಗಳಿಗೆ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ   ರಾಮಾಚಾರಿಯವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2