ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್
Sunday, August 30, 2020
(ಗಲ್ಫ್ ಕನ್ನಡಿಗ)ಮಂಗಳೂರು; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ದೃಢಪಟ್ಟಿದೆ.
(ಗಲ್ಫ್ ಕನ್ನಡಿಗ)ಈ ಬಗ್ಗೆ ಅವರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ನಾನು ಕೊರೊನಾ ಪರೀಕ್ಷೆ ನಡೆಸಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆ ದಾಖಲಾಗಿದ್ದೇನೆ. ನಿಮ್ಮೆಲ್ಲರ ಶುಭಾಶಯ ಮತ್ತು ಆಶೀರ್ವಾದದಿಂದ ಶೀಘ್ರ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
(ಗಲ್ಫ್ ಕನ್ನಡಿಗ)ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು ಅವರ ಸಂಪರ್ಕಕ್ಕೆ ಬಂದವರಿಗೆ ಆತಂಕ ಎದುರಾಗಿದೆ.
(ಗಲ್ಫ್ ಕನ್ನಡಿಗ)