-->

ಡಿ.ಜೆ.ಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ: ಶಾಂತಿ ಕಾಪಾಡಲು PFI ಮನವಿ

ಡಿ.ಜೆ.ಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ: ಶಾಂತಿ ಕಾಪಾಡಲು PFI ಮನವಿ


(ಗಲ್ಫ್ ಕನ್ನಡಿಗ)ಶಾಸಕರ ಸಂಬಂಧಿಯೋರ್ವ ಪ್ರವಾದಿ ನಿಂದನೆಯ ಪೋಸ್ಟ್ ಹಾಕಿದ ಕಾರಣದಿಂದಾಗಿ ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಜನತೆ ಶಾಂತಿ ಕಾಪಾಡಿ ಸಹಕರಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಮನವಿ ಮಾಡಿದ್ದಾರೆ.

(ಗಲ್ಫ್ ಕನ್ನಡಿಗ)ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೃತ್ಯವು ಸಂವಿಧಾನ ವಿರೋಧಿಯಾಗಿದೆ. ಪರಸ್ಪರರ ಧಾರ್ಮಿಕ ನಂಬಿಕೆಗಳನ್ನು ಗೌರವಿಸುವುದು ಇಲ್ಲಿನ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿರುವುದು ಅಕ್ಷಮ್ಯ ಅಪರಾಧವಾಗಿದೆ‌.

(ಗಲ್ಫ್ ಕನ್ನಡಿಗ)ಇಂತಹ ಕೃತ್ಯಗಳ ಕುರಿತು ಜನರು ಭಾವೋದ್ವೇಗಕ್ಕೆ ಒಳಗಾಗದೆ ಸಂಯಮವನ್ನು ವಹಿಸಬೇಕು, ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಲು ಮುಂದಾಗಬೇಕು. ಕಾನೂನು ಕೈಗೆತ್ತಿಕೊಳ್ಳದೇ ಕಾನೂನಾತ್ಮಕವಾಗಿ ಪ್ರತಿಭಟನೆ ನಡೆಸಬೇಕು. ಹಾಗೆಯೇ ಸಾರ್ವಜನಿಕರ ಆಸ್ತಿಪಾಸ್ತಿಗೆ ಯಾವುದೇ ಹಾನಿ ಉಂಟಾಗದಂತೆ ಎಚ್ಚರವಹಿಸಬೇಕು. ಅದೇ ರೀತಿ ಪೊಲೀಸ್ ಇಲಾಖೆಯು ಪ್ರಚೋದನಾಕಾರಿ ಪೋಸ್ಟ್ ಹಾಕಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಸಿರ್ ಪಾಶ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99