ಪುತ್ತೂರಿನಲ್ಲಿ ಮಗನಿಂದಲೇ ತಂದೆಯ ಕೊಲೆ
Monday, August 17, 2020
(ಗಲ್ಫ್ ಕನ್ನಡಿಗ)ಮಂಗಳೂರು; ತಂದೆಯನ್ನು ಮಗ ಹತ್ಯೆ ಮಾಡಿದ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ.
(ಗಲ್ಫ್ ಕನ್ನಡಿಗ)ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಬಳಿಯ ಬಾಲಯ ಎಂಬಲ್ಲಿ ಈ ಘಟನೆ ನಡೆದಿದೆ.
(ಗಲ್ಫ್ ಕನ್ನಡಿಗ)ಗಂಗಾಧರ ನಾಯ್ಕ್ ಮೃತಪಟ್ಟವರು.ಇವರ ಪುತ್ರ ಶಶಿಧರ್ ನಿಂದ ಈ ಹತ್ಯೆ ನಡೆದಿದೆ. ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿದ್ದು ಹೊಡೆದಾಡಿಕೊಂಡಿದ್ದಾರೆ. ಗಂಗಾಧರ್ ನಾಯ್ಕ್ ಅವರಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
(ಗಲ್ಫ್ ಕನ್ನಡಿಗ)