ಆಡು ಮೇಯಿಸುತ್ತಿದ್ದ ಯುವತಿಯ ರೇಪ್ ಗೆ ಯತ್ನ; ಆರೋಪಿ ಸಾದಿಕನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

(ಗಲ್ಫ್ ಕನ್ನಡಿಗ)ಮಂಗಳೂರು; ಆಡು ಮೇಯಿಸಲು ಹೋದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

(ಗಲ್ಫ್ ಕನ್ನಡಿಗ)ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಕಡಂಬಿಲ ಎಂಬಲ್ಲಿ ಈ ಘಟನೆ ನಡೆದಿದೆ.ನಿನ್ನಿಕಲ್ಲಿನಲ್ಲಿ ಯುವತಿ   ಆಡು ಮೇಯಿಸುತ್ತಿದ್ದಾಗ ಅಲ್ಲಿಗೆ ಬಂದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಇಕ್ಬಾಲ್  ಸಾದಿಕ್ (27) ಎಂಬಾತ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. 

ಹಾಡುಹಗಲೇ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದು ಯುವತಿ ಜೋರಾಗಿ ಕೂಗಿದ್ದಾಳೆ.  ಅಗ ಅಲ್ಲಿದ್ದ ಸಾರ್ವಜನಿಕರು ಸೇರಿ ಯುವತಿಯನ್ನು ರಕ್ಷಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಗಲ್ಫ್ ಕನ್ನಡಿಗ)