ರಾಮ ಮಂದಿರಕ್ಕೆ ಶಿಲಾನ್ಯಾಸ ವಿರೋಧಿಸಿ SDPI ವತಿಯಿಂದ ಮಂಗಳೂರಿನಲ್ಲಿ ಭಿತ್ತಿ ಪತ್ರ ಪ್ರದರ್ಶನ


(ಗಲ್ಪ್ ಕನ್ನಡಿಗ)ಮಂಗಳೂರು:-ಅಯೋಧ್ಯೆಯ ಬಾಬರಿ ಮಸ್ಜಿದ್ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಸಿರುವುದನ್ನು ವಿರೋಧಿಸಿ ಹಾಗೂ ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ,ಕಾಶ್ಮೀರ ವಿಶೇಷ ಕಾಯಿದೆ 370 ರದ್ದು ಮತ್ತು ತ್ರಿವಳಿ ತಲಾಕ್ ಕಾನೂನಿನ ವಿರುದ್ಧವಾಗಿ SDPI ವತಿಯಿಂದ ಮಂಗಳೂರಿನ ಜಿಲ್ಲಾ ಕಛೇರಿಯಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು.

ಗಲ್ಪ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ(ಗಲ್ಪ್ ಕನ್ನಡಿಗ)ಈ ಸಂದರ್ಭದಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್, ಎಸ್.ಡಿ.ಪಿ.ಐ ದ.ಕ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಜಲೀಲ್. ಕೆ, ಮಂ.ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸುಹೈಲ್ ಖಾನ್, ಕಾರ್ಪುರೇಟರ್ ಮುನೀಬ್ ಬೆಂಗ್ರೆ, ಪಾಪ್ಯುಲರ್ ಫ್ರಂಟ್ ಮಂಗಳೂರು ನಗರ ಅಧ್ಯಕ್ಷ ಖಾದರ್ ಕುಳಾಯಿ, ಕಾರ್ಯದರ್ಶಿ ಆರ್ಶದ್ ಬಂದರ್ ,ಇಮಾಮ್ಸ್ ಕೌನ್ಸಿಲ್ ಜಿಲ್ಲಾ ಕಾರ್ಯದರ್ಶಿ ರಫೀಕ್ ದಾರಿಮಿ ಮತ್ತು ಹಲವಾರು ಕಾರ್ಯಕರ್ತರು ಭಿತ್ತಿಪತ್ರ ಪ್ರದರ್ಶಿಸಿ ವಿರೋಧ ವ್ಯಕ್ತಪಡಿಸಿದರು.