ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾದಿಂದ ಗುಣಮುಖ(ಗಲ್ಪ್ ಕನ್ನಡಿಗ)ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕೊರೊನಾದಿಂದ ಗುಣಮುಖರಾಗಿದ್ದಾರೆ.


(ಗಲ್ಪ್ ಕನ್ನಡಿಗ)ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾದ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇನ್ನೊಂದು ವಾರ  ಕ್ವಾರಂಟೈನ್ ನಲ್ಲಿ ಇರಲಿದ್ದಾರೆ.


(ಗಲ್ಪ್ ಕನ್ನಡಿಗ)ಸಿದ್ದರಾಮಯ್ಯ ಜೊತೆಗೆ ಅವರ ಮಗ , ವರುಣ ಕ್ಷೇತ್ರದ ಶಾಸಕ ಯತೀಂದ್ರ ಅವರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿಗೆ ಆ. 3 ರಂದು ಚಿಕಿತ್ಸೆ ಗೆ ಮಣಿಪಾಲ್ ಆಸ್ಪತ್ರೆ ಗೆ ತೆರಳಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಕೊರೊನಾ ದೃಢಪಟ್ಟಿತ್ತು.

(ಗಲ್ಪ್ ಕನ್ನಡಿಗ)