-->
ads hereindex.jpg
ಗದ್ದಲ, ಕೋಲಾಹದಲ್ಲಿ ಸಿಡಬ್ಲ್ಯುಸಿ ಸಭೆ: ಹೈಡ್ರಾಮಾ ಮಧ್ಯೆ ಕೈ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ!

ಗದ್ದಲ, ಕೋಲಾಹದಲ್ಲಿ ಸಿಡಬ್ಲ್ಯುಸಿ ಸಭೆ: ಹೈಡ್ರಾಮಾ ಮಧ್ಯೆ ಕೈ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ!ನವದೆಹಲಿ: ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಹುನಿರೀಕ್ಷೆಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕೋಲಾಹಲ, ಗದ್ದಲದಲ್ಲಿ ನಡೆದಿದ್ದು, ಪಕ್ಷಾಧ್ಯಕ್ಷರ ಹುದ್ದೆಯಲ್ಲಿ ಮಹತ್ವದ ಬದಲಾವಣೆ ತರಲು ವಿಫಲವಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸರ್ವಸಮ್ಮತ ನಾಯಕತ್ವ ಸೇರಿದಂತೆ ದೊಡ್ಡ ಮಟ್ಟದಲ್ಲಿ ಬದಲಾವಣೆಯಾಗಬೇಕು ಎಂಬ ಆಗ್ರಹದ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಯಲ್ಲಿ ನಡೆದ ದೀರ್ಘಾವಧಿಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯಾವುದೇ ಮಹತ್ವದ ಬದಲಾವಣೆಯ ನಿರ್ಧಾರ ತೆಗೆದುಕೊಂಡಿಲ್ಲ. ಸೋನಿಯಾ ಗಾಂಧಿಯೇ ಇನ್ನೂ ಒಂದು ವರ್ಷಗಳ ಕಾಲಾವಧಿವರೆಗೆ ಹಂಗಾಮಿ ಅಧ್ಯಕ್ಷೆಯಾಗಿ ಮುಂದುವರಿಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.


ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಪಕ್ಷದ ಕೆಲ ಹಿರಿಯರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದಕ್ಕೆ ಹಿರಿಯ ನಾಯಕರಾದ ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್ ಪ್ರತಿಕ್ರಿಯೆ ವ್ಯಕ್ತಪಡಿಸಿ ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ತಮ್ಮ ಭಿನ್ನರಾಗ ತಳದೆ ಉಭಯ ನಾಯಕರು ತಮ್ಮ ಹಿಂದಿನ ಹೇಳಿಕೆಗೆ ಸ್ಪಷ್ಟನೆ ನೀಡಿ ಹೈಕಮಾಂಡ್ ಕೋಪವನ್ನು ತಣ್ಣಗಾಗಿಸಲು ಮುಂದಾಗಿದ್ದರು.


ಪಕ್ಷದ ನಾಯಕತ್ವದ ಬಗ್ಗೆ ಪತ್ರ ಬರೆದ 23 ಮಂದಿ ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧವೂ ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಕೊನೆಗೆ ದೀರ್ಘಾವಧಿ ಚರ್ಚೆ, ವಾಗ್ವಾದದ ನಂತರ ಸದ್ಯದ ಸ್ಥಿತಿಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ನಿರ್ಧರಿಸಿ, ಸೋನಿಯಾ ಗಾಂಧಿ ಅವರನ್ನೇ ಹಂಗಾಮಿ ಅಧ್ಯಕ್ಷರನ್ನಾಗಿ ಮುಂದುವರಿಸಲು ಸಭೆ ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.


ಪಕ್ಷದ ಅಧ್ಯಕ್ಷ ಸ್ಥಾನವನ್ನು ತೊರೆಯುವುದಾಗಿ ಸೋನಿಯಾ ಗಾಂಧಿ ಸಭೆಯಲ್ಲಿ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಪಕ್ಷ ಈಗಾಗಲೇ ನಾಯಕತ್ವದ ಬಿಕ್ಕಟ್ಟಿನಲ್ಲಿದೆ ಇಂತಹ ಸಂದರ್ಭದಲ್ಲಿ ಮತ್ತೊಮ್ಮೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಮೂಲಕ ಸಂಕಷ್ಟದ ಸಮಯದಲ್ಲಿ ಮತ್ತೆ ಪಕ್ಷವನ್ನು ಮುನ್ನಡೆಸಬೇಕು ಎಂದು ಹಿರಿಯ ನಾಯಕರು ಮಾಡಿಕೊಂಡರು ಎಂದು ವರದಿ ತಿಳಿಸಿದೆ.

Ads on article

Advertise in articles 1

advertising articles 2

IMG_20220827_133242

Advertise under the article

IMG-20220907-WA0033 IMG_20220827_133242