ಹಸುಳೆ ಮಗುವನ್ನು ಬಿಲ್ಡಿಂಗ್‌ನಿಂದ ಬಿಸಾಡಿ ತಾನೂ ಆತ್ಮಹತ್ಯೆ: ಟೆಕ್ಕಿಯ ಬರ್ಬರ ಕೃತ್ಯಕ್ಕೆ ಕಾರಣವೇನು ಗೊತ್ತಾ?
Monday, August 31, 2020
(ಗಲ್ಫ್ ಕನ್ನಡಿಗ)ಹೈದರಾಬಾದ್: ಈಗಷ್ಟೇ ಕಣ್ಣು ಬಿಟ್ಟು ಲೋಕ ಕಂಡ ಮಗುವನ್ನು 9ನೇ ಮಹಡಿಯಿಂದ ಕೆಳಕ್ಕೆ ಬಿಸಾಡಿ ಮಹಿಳೆಯೊಬ್ಬಳು ತಾನೂ ಅದೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.
(ಗಲ್ಫ್ ಕನ್ನಡಿಗ)8 ತಿಂಗಳ ಹೆಣ್ಣು ಮಗು ಘಟನಾ ಸ್ಥಳದಲ್ಲೇ ಮೃತಪಟ್ಟರೆ, ಟೆಕ್ಕಿ ತಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮೃತ ಮಹಿಳೆಯ ಕುಟುಂಬದವರು ಈಕೆಯ ಆತ್ಮಹತ್ಯೆ ಬಗ್ಗೆ ಆಕ್ರೋಶ ಮತ್ತು ಅನುಮಾನ ವ್ಯಕ್ತಪಡಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಟೂರು ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
(ಗಲ್ಫ್ ಕನ್ನಡಿಗ)ಗುಂಟೂರಿನಲ್ಲಿ ಶನಿವಾರ ಈ ಘಟನೆ ನಡೆದಿದೆ. ಮೃತಳನ್ನು ಮನೋಗ್ನಾ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಹೆಣ್ಣು ಮಗು ಸ್ಥಳದಲ್ಲೇ ಮೃತಪಟ್ಟರೆ, ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮೃತ ಮಹಿಳೆಯ ಕುಟುಂಬದವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಏನಿದು ಪ್ರಕರಣ?
(ಗಲ್ಫ್ ಕನ್ನಡಿಗ)ಮೂರು ವರ್ಷಗಳ ಹಿಂದೆ ಪ್ರಕಾಶಂ ಜಿಲ್ಲೆಯ ಪಂಗಲೂರು ಗ್ರಾಮದ ಮನೋಗ್ನಾ ಅದೇ ಜಿಲ್ಲೆಯ ನರ್ರಾ ಕಲ್ಯಾಣ್‍ಚಂದ್ರ ಜೊತೆ ಮದುವೆಯಾಗಿದ್ದಳು. ಈ ದಂಪತಿಗೆ ತುಳಸಿ ಎಂಬ ಒಂಬತ್ತು ತಿಂಗಳ ಹೆಣ್ಣು ಮಗುವಿದೆ. ಕಲ್ಯಾಣ್ ಚಂದ್ರ ನೌಕಾಪಡೆಯ ಖಾಸಗಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದು, ಮನೋಗ್ನಾ ಹೈದರಾಬಾದ್‍ನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು.
(ಗಲ್ಫ್ ಕನ್ನಡಿಗ)ಮದುವೆಯ ಸಂದರ್ಭದಲ್ಲಿ ಮೃತ ಟೆಕ್ಕಿ ಮನೋಗ್ನಾಗೆ 50 ಗ್ರಾಂ ಚಿನ್ನ, ಐದು ಗುಂಟೆ ಭೂಮಿ, 2 ಲಕ್ಷ ರೂ. ನಗದು ನೀಡಲಾಗಿತ್ತು. ಇದರ ಜೊತೆ ವರದಕ್ಷಿಣೆ ರೂಪದಲ್ಲಿ ಹೊಚ್ಚ ಹೊಸ ಮನೆಯನ್ನು ಕೂಡ ನೀಡಲಾಗಿತ್ತು ಎಂದು ಮನೋಗ್ನಾ ಪೋಷಕರು ತಿಳಿಸಿದ್ದಾರೆ. ಅಲ್ಲದೆ, ಇನ್ನಷ್ಟು ವರದಕ್ಷಿಣೆಗಾಗಿ ತನ್ನ ಮಗಳಿಗೆ ಪತಿ ಮತ್ತು ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪತಿ ಮತ್ತು ಅತ್ತೆ-ಮಾವನ ಕಿರುಕುಳ ತಾಳಲಾರದೆ ತನ್ನ ಪುಟಾಣಿ ಮಗುವಿನೊಂದಿಗೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಟೆಕ್ಕಿ ಮನೋಗ್ನಾ ಪೋಷಕರು ಪೊಲೀಸರಲ್ಲಿ ದೂರು ನೀಡಿದ್ದಾರೆ.
(ಗಲ್ಫ್ ಕನ್ನಡಿಗ)ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದ ಬಳಿಕ ಮೃತ ಟೆಕ್ಕಿ ಗಂಡ ಕಲ್ಯಾಣ್ ತನ್ನ ಪೋಷಕರೊಂದಿಗೆ ಗುಂಟೂರಿನ ಲಕ್ಷ್ಮಿಪುರಂ ಕಮಲೇಶ್ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದ. ಆದರೆ ಶನಿವಾರ ಮನೋಗ್ನಾ ಮೊದಲು ಮಗಳನ್ನು 9 ಅಂತಸ್ತಿನ ಕಟ್ಟಡದಿಂದ ಎಸೆದಿದ್ದು, ನಂತರ ತಾನೂ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾರೆ ಎಂದು ಗುಂಟೂರು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಸತ್ಯನಾರಾಯಣ ಮಾಧ್ಯಮಕ್ಕೆ ತಿಳಿಸಿದ್ದಾರೆ.
(ಗಲ್ಫ್ ಕನ್ನಡಿಗ)ಸದ್ಯಕ್ಕೆ ಮೃತಳ ಪೋಷಕರು ನೀಡಿದ ದೂರಿನ ಅನ್ವಯ ಈ ಕುರಿತು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
(ಗಲ್ಫ್ ಕನ್ನಡಿಗ)