ಲೆಕ್ಕಕೊರ್ಲೆ ಎಂದು ಹರೀಶ್ ಪೂಂಜಾ ಕಚೇರಿಗೆ ವಸಂತ ಬಂಗೇರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆಗೆ ಯತ್ನ (video)(ಗಲ್ಫ್ ಕನ್ನಡಿಗ)ಮಂಗಳೂರು: ಕಾಳಜಿ ಫಂಡ್ ಹೆಸರಿನಲ್ಲಿ ಶಾಸಕ ಹರೀಶ್ ಪೂಂಜಾ ಹಣ ಸಂಗ್ರಹಿಸುತ್ತಿದ್ದ ಇದರ ಲೆಕ್ಕ ಕೊಡಿ ಎಂದು ಆಗ್ರಹಿಸಿ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಹರೀಶ್ ಪೂಂಜಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

(ಗಲ್ಫ್ ಕನ್ನಡಿಗ)ಕಳೆದ ವರ್ಷ ನಡೆದ ಪ್ರವಾಹ ಸಂದರ್ಭದಲ್ಲಿ ಕಾಳಜಿ ಘಂಡ್ ಹೆಸರಿನಲ್ಲಿ ಸಂಗ್ರಹಿಸಲಾದ ಹಣದ ಸಂಪೂರ್ಣ ಲೆಕ್ಕಕೊಡಿ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಕಛೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ಪ್ರತಿಭಟನಾಕಾರರು ಮೊದಲು ಮಾಜಿ ಶಾಸಕ ವಸಂತ ಬಂಗೇರ ಅವರ ಕಛೇರಿ ಮುಂಭಾಗ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು.ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಹರೀಶ್ ಪೂಂಜಾ ಕಛೇರಿ ಮುಂಭಾಗಕ್ಕೆ ಮೆರವಣಿಗೆಯಲ್ಲಿ ಸಾಗಲು ಪ್ರಯತ್ನಿಸಿದ್ದು.ಪೋಲಿಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ತಡೆಯಲು ಮುಂದಾದರು. ಈ ವೇಳೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೋಲಿಸರ ನಡುವೆ ಕೆಲಕಾಲ ಮಾತಿನ ವಾಗ್ವಾದ ನಡೆಯಿತು.

(ಗಲ್ಫ್ ಕನ್ನಡಿಗ)