
ಮಂಗಳೂರು ಕ್ರೈಂ ವಿಭಾಗ ಡಿಸಿಪಿಯಾಗಿ ವಿನಯ್ ಗಾಂವ್ಕರ್
Saturday, August 8, 2020
(ಗಲ್ಫ್ ಕನ್ನಡಿಗ)ಮಂಗಳೂರು; ಮಂಗಳೂರು ನಗರ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀಗಣೇಶ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಉಪಪೊಲೀಸ್ ಆಯುಕ್ತರಾಗಿ ವಿನಯ್ ಗಾಂವ್ಕರ್ ಅವರನ್ನು ನೇಮಕಗೊಳಿಸಲಾಗಿದೆ.
(ಗಲ್ಫ್ ಕನ್ನಡಿಗ)ರಾಜ್ಯ ಪೊಲೀಸ್ ಇಲಾಖೆಯ ಐಪಿಎಸ್, ನಾನ್ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಶುಕ್ರವಾರ ನಡೆದಿದ್ದು, ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತ ಲಕ್ಷ್ಮೀ ಗಣೇಶ್ ಸೇರಿದಂತೆ 8 ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.
(ಗಲ್ಫ್ ಕನ್ನಡಿಗ)ವಿನಯ್ ಗಾಂವ್ಕರ್ ಅವರಿಗೆ ಇತ್ತೀಚೆಗಷ್ಟೇ ಪದೋನ್ನತಿಯಾಗಿದ್ದು, ಅವರನ್ನು ಮಂಗಳೂರು ಡಿಸಿಪಿಯಾಗಿ ನೇಮಕಗೊಳಿಸಲಾಗಿದೆ.
(ಗಲ್ಫ್ ಕನ್ನಡಿಗ)ಲಕ್ಷ್ಮೀಗಣೇಶ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ವರ್ಗಾಯಿಸಲಾಗಿದೆ.
ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಅಧೀಕ್ಷಕರಾಗಿ ಸಿ.ಎನ್. ಬೋಪಯ್ಯ ಅವರನ್ನು ನಿಯುಕ್ತಿಗೊಳಿಸಿ, ರಾಜ್ಯ ಸರಕಾರ ಆದೇಶ ಮಾಡಿದೆ. ಮಂಗಳೂರು ನಗರ ಸಂಚಾರ ವಿಭಾಗದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾಗಿದ್ದ ಮಂಜುನಾಥ್ ಶೆಟ್ಟಿ ಅವರನ್ನು ಇತ್ತೀಚೆಗೆ ಪದೋನ್ನತಿಗೊಳಿಸಲಾಗಿದ್ದು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ನಿಯುಕ್ತಿಗೊಳಿಸಲಾಗಿದೆ.