
ಬೆಳ್ತಂಗಡಿಯಲ್ಲಿ ಯಮನಾಗಿ ಬಂದ ಲಾರಿ: 22 ವರ್ಷದ ಯುವಕ ಸಾವು
Sunday, September 13, 2020
(ಗಲ್ಫ್ ಕನ್ನಡಿಗ) ಮಂಗಳೂರು: ಬೆಳ್ತಂಗಡಿ ತಾಲೂಕಿನ ಬದ್ಯಾರಿನಲ್ಲಿ ಸ್ಕೂಟಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
(ಗಲ್ಫ್ ಕನ್ನಡಿಗ) ಬೆಳ್ತಂಗಡಿ ತಾಲೂಕಿನ ಗರ್ಡಾಡಿ ನಿವಾಸಿ ಗಿರೀಶ್ ಮೂಲ್ಯ ( 22) ಸಾವನ್ನಪ್ಪಿದವರು. ತಾಲೂಕಿನ ಪಡಂಗಿ ಗ್ರಾಮದ ಬದ್ಯಾರು ಎಂಬಲ್ಲಿ ಈ ಘಟನೆ ನಡೆದಿದೆ.
(ಗಲ್ಫ್ ಕನ್ನಡಿಗ) ಬೆಳ್ತಂಗಡಿಯ ಆಳದಂಗಡಿ ಕಡೆಯಿಂದ ಬರುತ್ತಿದ್ದ ಲಾರಿ ಸ್ಕೂಟಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಿರೀಶ್ ಮೂಲ್ಯ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಗಲ್ಫ್ ಕನ್ನಡಿಗ)