ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿಯಿಂದ ಸಹಿ ಸಂಗ್ರಹ
Tuesday, September 15, 2020
(ಗಲ್ಫ್ ಕನ್ನಡಿಗ)ಬಂಟ್ವಾಳ;ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ವತಿಯಿಂದ ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ಇಂದು ನಡೆಯಿತು.
(ಗಲ್ಫ್ ಕನ್ನಡಿಗ)ರಾಷ್ಟ್ರವ್ಯಾಪಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಾಗಬೇಕೆಂದು ಒತ್ತಾಯಿಸಿ ಸಹಿ ಸಂಗ್ರಹ ಅಭಿಯಾನವನ್ನು ಬಂಟ್ವಾಳ ಮಿನಿ ವಿಧಾನಸೌದ ದ ಮುಂಭಾಗದಲ್ಲಿ ನಡೆಸಲಾಯಿತು.
(ಗಲ್ಫ್ ಕನ್ನಡಿಗ)ಈ ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹಾಗೂ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್ .ಆರ್ ಸಹಿ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿ ಪಂ ಸದ್ಯಸ ರವೀಂದ್ರ ಕಂಬಳಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ತಾಲೂಕು ಕಛೇರಿಗೆ ಆಗಮಿಸಿದ ಸಾರ್ವಜನಿಕರು ತಮ್ಮ ಸಹಿ ಹಾಕುವ ಮೂಲಕ ಬೆಂಬಲ ಸೂಚಿಸಿದರು.
(ಗಲ್ಫ್ ಕನ್ನಡಿಗ) ಈ ಸಂದರ್ಭದಲ್ಲಿ ಅ.ಭಾ.ವಿ.ಪ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ,ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು ,ಹರ್ಷಿತ್ ಕೊಯಿಲ ಅಖಿಲಾಷ್, ದಿನೇಶ್ ಕೊಯಿಲ, ನಿಶ್ಚಿತ್ ಬಂಟ್ವಾಳ್. ಹಿರಿಯ ಕಾರ್ಯಕರ್ತರಾದ ಪ್ರಣಮ್ ರಾಜ್ ಅಜ್ಜಿಬೆಟ್ಟು,ಮನೀಷ್ ರಾಯಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು
(ಗಲ್ಫ್ ಕನ್ನಡಿಗ)