ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರು: ವಿಎಚ್‌ಪಿ ಒತ್ತಾಯಮಂಗಳೂರು: ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ವಿಶ್ವಹಿಂದೂ ಪರಿಷದ್ ಒತ್ತಾಯ ಮಾಡಿದೆ.

ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದೂ ಸಮಾಜದಲ್ಲಿನ ಮಹಾ ಪಿಡುಗು ಅಸ್ಪೃಶ್ಯತೆಯ ನಿರ್ಮೂಲನೆಗೆ ಶ್ರಮಿಸಿದರು. ಸಮಾಜದಲ್ಲಿ ಜಾತಿ ಜಾತಿಗಳ ನಡುವಿನ ಅಂತರ ನೀಗಿಸಲು ಸಮಾನತೆ ಸಾಮರಸ್ಯಕ್ಕೆ ಹೋರಾಡಿದ ಮಹಾನ್ ಸಂತರು ಅವರ ಹೆಸರನ್ನು ಲೇಡಿಹಿಲ್ ಸರ್ಕಲ್ ಗೆ ನಾಮಕರಣ ಮಾಡುವ ಮೂಲಕ ಅವರ ಚಿಂತನೆಗಳನ್ನು ಸಮಾಜಕ್ಕೆ ತಿಳಿಸುವಂತಾಗಲಿ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.

ಶೀಘ್ರವೇ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಸರಕಾರಕ್ಕೆ ಈ ಮೂಲಕ ಆಗ್ರಹ ಮಾಡುತ್ತಿದ್ದೇವೆ. ಲೈಟ್ ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸುಂದರ್ ರಾಮ್ ಶೆಟ್ಟಿ ರಸ್ತೆ ಎಂದು ನಾಮಕರಣ ಮಾಡಿರುವುದು ಸ್ವಾಗತಾರ್ಹ ಹಾಗು ಅಭಿನಂದನೀಯ ಎಂದು ವಿಶ್ವಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಗೋಪಾಲ್ ಕುತ್ತಾರ್ ತಿಳಿಸಿದರು