-->

(JOB) ಲ್ಯಾಬ್ ಟೆಕ್ನೀಷನ್ ಹಾಗೂ ಫಾರ್ಮಸಿಸ್ಟ್ ಹುದ್ದೆ – ಅರ್ಜಿ ಆಹ್ವಾನ

(JOB) ಲ್ಯಾಬ್ ಟೆಕ್ನೀಷನ್ ಹಾಗೂ ಫಾರ್ಮಸಿಸ್ಟ್ ಹುದ್ದೆ – ಅರ್ಜಿ ಆಹ್ವಾನ


(ಗಲ್ಪ್ ಕನ್ನಡಿಗ)ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದಲ್ಲಿ ಬರುವ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಲು ಲ್ಯಾಬ್ ಟೆಕ್ನೀಷನ್, ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ನೇಮಕ ಮಾಡಲು  ಸೆಪ್ಟೆಂಬರ್ 12 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನೇರ ಸಂದರ್ಶನ ನಡೆಯಲಿದೆ.

ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ


  
(ಗಲ್ಪ್ ಕನ್ನಡಿಗ) ಹುದ್ದೆಯ ವಿವರ ಇಂತಿವೆ:-

 ಪ್ರಯೋಗ ಶಾಲಾ ತಂತ್ರಜ್ಞರು – 2 ಹುದ್ದೆ, ವಿದ್ಯಾರ್ಹತೆ - ಡಿ.ಎಂ.ಎಲ್.ಟಿ (ಕರ್ನಾಟಕ ಪ್ಯಾರ ಮೆಡಿಕಲ್ ಬೋರ್ಡ್ ಪ್ರಮಾಣ ಪತ್ರ ಹೊಂದಿರಬೇಕು), ವೇತನ - ರೂ. 20,000, ಫಾರ್ಮಸಿಸ್ಟ್ - 17 ಹುದ್ದೆ, ವಿದ್ಯಾರ್ಹತೆ- ಡಿ ಫಾರ್ಮಾ (ಫಾರ್ಮಸಿ ಕೌನ್ಸಿಲ್ ನಲ್ಲಿ ನೋಂದಣಿ ಆಗಿರಬೇಕು), ವೇತನ -ರೂ. 20,000.


  
(ಗಲ್ಪ್ ಕನ್ನಡಿಗ) ಸಲ್ಲಿಸಬೇಕಾದ ದಾಖಲೆಗಳು:- ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಡೀಕೃತ ನಕಲು ಪ್ರತಿಗಳು, ಅನುಭವಕ್ಕೆ ಆದ್ಯತೆ ನೀಡಲಾಗುವುದು. ಆದ್ದರಿಂದ ಅನುಭವ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಹಾಜರಾಗುವುದು. (ಈಗಾಗಲೇ ಈ ಕಚೇರಿಗೆ ಅರ್ಜಿಯನ್ನು ಸಲ್ಲಿಸಿದವರು ನೇರ ಸಂದರ್ಶನಕ್ಕೆ ಎಲ್ಲಾ ದಾಖಲಾತಿಗಳೊಂದಿಗೆ ಹಾಜರಾಗುವುದು).


     
(ಗಲ್ಪ್ ಕನ್ನಡಿಗ)ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0824-2423672  ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99