ಕುಡ್ಲದಲ್ಲಿ ಪಾರ್ಟಿ ಆಯೋಜಿಸುತ್ತಿದ್ದ ಡ್ರಗ್ಸ್ ಕೇಸಲ್ಲಿ ಬಂಧಿತ ಬಾಲಿವುಡ್ ನಟ ಕಿಶೋರ್ ಶೆಟ್ಟಿ; ಮುಂದುವರಿದ ತನಿಖೆ (video)
Saturday, September 19, 2020
(ಗಲ್ಫ್ ಕನ್ನಡಿಗ)ಮಂಗಳೂರು: ಡ್ರಗ್ಸ್ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತನಾಗಿರುವ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಮಂಗಳೂರಿನಲ್ಲಿ ಪಾರ್ಟಿ ಆಯೋಜಿಸುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು ಈ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಳಿಸಿದ್ದಾರೆ.
(ಗಲ್ಫ್ ಕನ್ನಡಿಗ)ನಿನ್ನೆ ರಾತ್ರಿ ಬಾಲಿವುಡ್ ನಟ , ಡ್ಯಾನ್ಸರ್ ಕಿಶೋರ್ ಶೆಟ್ಟಿ ಮತ್ತು ಅಕೀಲ್ ನೌಶೀಲ್ ಎಂಬ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇವರನ್ನು ವಿಚಾರಣೆ ಮಾಡುತ್ತಿದ್ದ ವೇಳೆ ಮಂಗಳೂರಿನಲ್ಲಿ ಪಾರ್ಟಿ ಮಾಡುತ್ತಿದ್ದ ಬಗ್ಗೆ ಬಾಯಿ ಬಿಟ್ಟಿದ್ದಾರೆ.
(ಗಲ್ಫ್ ಕನ್ನಡಿಗ)ಕಿಶೋರ್ ಅಮನ್ ಶೆಟ್ಟಿ ಎಬಿಸಿಡಿ ಹಿಂದಿ ಚಲನಚಿತ್ರದಲ್ಲಿ ನಟಿಸಿದ್ದು ಖ್ಯಾತ ಡ್ಯಾನ್ಸರ್ ಆಗಿದ್ದಾನೆ. ಅಕೀಲ್ ನೌಶೀಲ್ ದುಬೈನಲ್ಲಿ ಸೇಪ್ಟಿ ಆಫೀಸರ್ ಆಗಿ ಕೆಲಸ ಮಾಡಿ ವರ್ಷದಿಂದೀಚೆಗೆ ಮಂಗಳೂರಿಗೆ ಬಂದಿದ್ದ.
(ಗಲ್ಫ್ ಕನ್ನಡಿಗ)ಇಬ್ಬರು ಮಾದಕ ವಸ್ತು ಮಾರಾಟ ಮತ್ತು ಸೇವನೆಯಲ್ಲಿ ತೊಡಗಿದ್ದು ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಬಂಧಿತರಾಗಿದ್ದಾರೆ. ಇವರಿಂದ ಮಾದಕ ವಸ್ತು, ಬಜಾಜ್ ಡಿಸ್ಕವರಿ ಬೈಕ್ ಮತ್ತು ಎರಡು ಮೊಬೈಲ್ ಪೋನ್ ವಶಪಡಿಸಿಕೊಳ್ಳಲಾಗಿದೆ. ಇವರಿಗೆ ಬೆಂಗಳೂರು ಮತ್ತು ಮುಂಬಯಿ ಸಂಪರ್ಕದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ.
(ಗಲ್ಫ್ ಕನ್ನಡಿಗ)