ಡ್ರಗ್ ಮುಕ್ತ ಕರ್ನಾಟಕ: ಡಿಐಜಿ ಪ್ರವೀಣ್ ಸೂದ್ ಪಣ: ದಂಧೆಯನ್ನು ಬುಡಸಮೇತ ಮಟ್ಟ ಹಾಕಲು ಕರೆ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬೇರೂರಿದ್ದ ಮಾದಕ ದ್ರವ್ಯದ ಅಸಲಿ ಮುಖ ಬಯಲಾಗಿದೆ. ಇದರ ಬೆನ್ನಲ್ಲೇ ಪೊಲೀಸ್ ಇಲಾಖೆ ಡ್ರಗ್ ಮಾಫಿಯಾದ ವಿರುದ್ಧ ಹೋರಾಟ ಆರಂಭಿಸಿದೆ. ರಾಜ್ಯವನ್ನು ಡ್ರಗ್ ಮುಕ್ತವನ್ನಾಗಿ ಮಾಡಬೇಕು ಮತ್ತು ಡ್ರಗ್ ಮಾಫಿಯಾದ ವಿರುದ್ಧ ನಿರ್ಣಾಯಕ ಸಮರ ಸಾರಲಾಗಿದೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಸ್ಪಷ್ಟಪಡಿಸಿದ್ದಾರೆ.
ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗುರುವಾರ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಾದಕ ವಸ್ತು ಸಾಗಾಟ, ಡ್ರಗ್ ಮಾರಾಟ ತಡೆಗಾಗಿ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಹಲವೆಡೆ ದಾಳಿ ನಡೆಸಿ ಮಾದಕ ದ್ರವ್ಯ ಹಾಗೂ ನಶೆ ಏರಿಸುವ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ, ದಂಧೆಯ ಜೊತೆಗೆ ನಂಟು ಹೊಂದಿರುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಐಜಿಪಿ ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳ ಎಸ್.ಪಿ ಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಡ್ರಗ್ ಮಾಫಿಯಾ ವಿರುದ್ಧ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ಮುಂದೆಯೂ ಪರಿಣಾಮಕಾರಿಯಾಗಿ ನಡೆಯುತ್ತಲೇ ಇರುತ್ತದೆ. ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶದ, ತೆಲಂಗಾಣ ರಾಜ್ಯಗಳಿಗೆ ಕರ್ನಾಟಕ ರಾಜ್ಯದ ಜಿಲ್ಲೆಗಳು ಹೊಂದಿಕೊಂಡಿದ್ದು,. ಯಾವುದೇ ರಾಜ್ಯ – ಜಿಲ್ಲೆಗಳ ಗಡಿಗೆ ಹೊಂದಿಕೊಂಡಿದ್ದರ ಗಡಿ ರಾಜ್ಯ- ಜಿಲ್ಲೆಗಳಿಂದ ಮಾದಕ ವಸ್ತುಗಳು ಒಳ ಬಾರದಂತೆ ಹತೋಟಿಗೆ ತರುವ ಕುರಿತು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.