ಸುಳ್ಯದಲ್ಲಿ ಗರ್ಭಿಣಿಯಾದ 15 ವರ್ಷದ ಬಾಲಕಿ : ಅಂಗನವಾಡಿ ಕಾರ್ಯಕರ್ತೆಯಿಂದ ಬಯಲಾಯಿತು ಯುವತಿಯ ಅತ್ಯಾಚಾರ ಪ್ರಕರಣ(ಗಲ್ಪ್ ಕನ್ನಡಿಗ)ಮಂಗಳೂರು: ಅಪ್ರಾಪ್ತ ಯುವತಿಯೊಬ್ಬಳನ್ನು ಅತ್ಯಾಚಾರ ನಡೆಸಿರುವ ಘಟನೆಯೊಂದು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯಿಂದ ಬಯಲಾದ ಘಟನೆ ಸುಳ್ಯದಲ್ಲಿ ನಡೆದಿದೆ.

 

ಸುಳ್ಯದ ಕಲ್ಲುಮುಟ್ಟು ಎಂಬಲ್ಲಿ ಈ ಘಟನೆ ನಡೆದಿದ್ದು ಯುವತಿಯ ಅತ್ಯಾಚಾರಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆ ಯುವತಿ ಗರ್ಭವತಿಯಾಗಿರುವ ವಿಚಾರ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯ ಗಮನಕ್ಕೆ ಬಂದಿತ್ತು. ಅವರು ಸುಳ್ಯ ಸಿಡಿಪಿಒ ಅವರಿಗೆ ವಿಷಯ ತಿಳಿಸಿದ್ದರು. ಸಿಡಿಪಿಒ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಬಾಲಕಿಯ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ


(ಗಲ್ಪ್ ಕನ್ನಡಿಗ)ಪ್ರಕರಣ ಸಂಬಂಧ ಹುಬ್ಬಳ್ಳಿಯ ಮುತ್ತಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕಳೆದ ಕೆಲವು ವರ್ಷಗಳಿಂದ ಸುಳ್ಯದ ಕಲ್ಲುಮುಟ್ಲು ಎಂಬಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕೆಲಸಕ್ಕೆ ಹೋಗುತ್ತಿದ್ದನು. ಮುತ್ತಪ್ಪನಿಗೆ ಅಲ್ಲೇ 15 ವರ್ಷ ಪ್ರಾಯದ ಬಾಲಕಿಯ ಪರಿಚಯವಾಗಿದೆ. ಈತ ಬಾಲಕಿಯನ್ನು ಅತ್ಯಾಚಾರ ಮಾಡಿದ್ದು ಯುವತಿ ಗರ್ಭವತಿಯಾಗಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನು ಓದಿ; *ಸುಳ್ಯದಲ್ಲಿ ಬಾಲಕಿಯ ಸ್ನಾನದ ದೃಶ್ಯ ಮೊಬೈಲ್ ನಲ್ಲಿ ಸೆರೆ; ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಆರೋಪಿ ಮಾಡಿದ್ದು ಹೀಗೆ

ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ


(ಗಲ್ಪ್ ಕನ್ನಡಿಗ)