ಮಂಗಳೂರು ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ವೆಂಟಿಲೇಟರ್ ಕೊರತೆ; ಜಿಲ್ಲಾಕಾಂಗ್ರೆಸ್ ನಿಂದ ಪ್ರತಿಭಟನೆ (video)
(ಗಲ್ಫ್ ಕನ್ನಡಿಗ)ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತ ರೋಗಿಗಳಿಗೆ ವೆಂಟಿಲೇಟರ್ ಕೊರತೆ ಇದೆ ಎಂದು ಆಪಾದಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ಇಂದು ಪ್ರತಿಭಟನೆ ನಡೆಯಿತು.

(ಗಲ್ಫ್ ಕನ್ನಡಿಗ)ಕೋವಿಡ್ ಆಸ್ಪತ್ರೆಯಾಗಿರುವ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೊರೊನಾ ರೋಗಿಗಳಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡದ ಸರಕಾರದ ವಿರುದ್ದ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.


(ಗಲ್ಫ್ ಕನ್ನಡಿಗ)ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕರಾದ ಜೆ ಆರ್ ಲೋಬೋ, ಮೊಯ್ದಿನ್ ಬಾವ ಮೊದಲಾದವರು ಉಪಸ್ಥಿತರಿದ್ದರು.
(ಗಲ್ಫ್ ಕನ್ನಡಿಗ)