ಡ್ರಗ್ ಆರೋಪಿಗಳ ಪೆರೆಡ್ ನಡೆಸಿ ಖಡಕ್ ವಾರ್ನಿಂಗ್ ನೀಡಿದ ಮಂಗಳೂರು ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ವಿಕಾಸ್(video)
(ಗಲ್ಪ್ ಕನ್ನಡಿಗ)ಮಂಗಳೂರು: ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿರುವ ಮಾದಕ ದ್ರವ್ಯ ಸಾಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಮಂಗಳೂರು ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ವಿಕಾಸ್ ಅವರು ಇಂದು ಗಾಂಜಾ ಸಾಗಾಟದ ಆರೋಪಿಗಳ ಪೆರೆಡ್ ನಡೆಸಿ ಖಡಕ್ ವಾರ್ನಿಂಗ್ ನೀಡಿದರು.
ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ)ಈ ಪೆರೆಡ್ ನಲ್ಲಿ ಮಂಗಳೂರು ಮತ್ತು ಕೇರಳದ ಕಾಸರಗೋಡು ಮೂಲದ ನೂರಕ್ಕೂ ಅಧಿಕ ಗಾಮಜಾ ಸಾಗಾಟ ಆರೋಪಿಗಳು ಭಾಗಿಯಾಗಿದ್ದರು. ಪೆರಡ್ ನಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬಗಾಂಜಾ ಸಾಗಾಟ ಆರೋಪಿಗಳನ್ನು ಪೊಲೀಸ್ ಕಮೀಷನರ್ ಪ್ರತ್ಯೇಕ ವಿಚಾರಣೆ ನಡೆಸಿದ್ದಾರೆ.
(ಗಲ್ಪ್ ಕನ್ನಡಿಗ)ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರಿಗೆ ಕೇರಳದ ಕಾಸರಗೋಡು, ಗೋವಾ , ಆಂದ್ರ, ಒರಿಸ್ಸಾ ಗಳಿಂದ ಗಾಂಜಾ ಸರಬರಾಜು ಆಗುತ್ತಿರುವ ಬಗ್ಗೆ ಮಾಹಿತಿ ಇದೆ. ಇಂದು ಪೆರಡೆ ನಡೆಸುವ ಮೂಲಕ ಗಾಂಜಾ ಸಾಗಾಟದ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಗಾಂಜಾ ಸಾಗಾಟ ಕೃತ್ಯದಲ್ಲಿ ತೊಡಗಿದ್ದಲ್ಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
(ಗಲ್ಪ್ ಕನ್ನಡಿಗ)