-->

ಗಣಿತದಲ್ಲಿ ಸಾಧನೆ-ಶಿಕ್ಷಕ ಯಾಕೂಬ್ ಅವರಿಗೆ ರಾಷ್ಟ್ರಪ್ರಶಸ್ತಿ ಪ್ರದಾನ

ಗಣಿತದಲ್ಲಿ ಸಾಧನೆ-ಶಿಕ್ಷಕ ಯಾಕೂಬ್ ಅವರಿಗೆ ರಾಷ್ಟ್ರಪ್ರಶಸ್ತಿ ಪ್ರದಾನ



(ಗಲ್ಫ್ ಕನ್ನಡಿಗ)ಮಂಗಳೂರು : ಈ ವರ್ಷದ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ನಡ ಸರಕಾರಿ ಶಾಲೆಯ ಶಿಕ್ಷಕ ಯಾಕೂಬ್ ಕೊಯ್ಯೂರು ಅವರಿಗೆ ಶಿಕ್ಷಕರ ದಿನಾಚರಣೆಯಾದ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.


(ಗಲ್ಫ್ ಕನ್ನಡಿಗ) ವರ್ಚುವೆಲ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರ್ರಪತಿ ಭವನದಲ್ಲಿ ರಾಷ್ಟ್ರ್ರಪತಿ ರಾಮನಾಥ ಕೋವಿಂದ್ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.  ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ. ರಮೇಶ್ ಪೊಕ್ರಿಯಾಲ್ ಅವರು ಉಪಸ್ಥಿತರಿದ್ದರು.

 (ಗಲ್ಫ್ ಕನ್ನಡಿಗ) ಯಾಕೂಬ್ ಅವರ ಸಾಧನೆಗಳ ಬಗ್ಗೆ ಕಿರುಚಿತ್ರವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. 
 ಮಂಗಳೂರಿನಲ್ಲಿ ಜಿಲ್ಲಾ ಪಂಚಾಯತ್ ವೀಡಿಯೋ ಕಾನ್ಫೆರೆನ್ಸ್ ಹಾಲ್‍ನಲ್ಲಿ ಯಾಕೂಬ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಸಿದರು. ಬಳಿಕ  ಕೇಂದ್ರ ಸರಕಾರದ ಪರವಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಯಾಕೂಬ್ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

(ಗಲ್ಫ್ ಕನ್ನಡಿಗ) ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾಮಿ ಅವರು ಉಪಸ್ಥಿತರಿದ್ದರು.

  (ಗಲ್ಫ್ ಕನ್ನಡಿಗ) ರಾಜ್ಯದಲ್ಲೇ ಮೊದಲಬಾರಿಗೆ ಗಣಿತ ಪ್ರಯೋಗಾಲಯವನ್ನು ನಡ ಸರಕಾರಿ ಶಾಲೆಯಲ್ಲಿ ಸ್ಥಾಪಿಸಿ, ಗಣಿತವನ್ನು ಸುಲಭವಾಗಿ ಮಕ್ಕಳಿಗೆ ಕಲಿಸುವಲ್ಲಿ ಯಶಸ್ವಿಯಾಗಿರುವ ಯಾಕೂಬ್, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಬೋಧನೆ, ಪ್ರಯೋಗ, ವೀಡಿಯೋಗಳನ್ನು ಹಂಚಿದ್ದಾರೆ. ರಾಜ್ಯದಲ್ಲೇ ಮಾದರಿಯಾಗಿ ಈ ಗಣಿತ ಪ್ರಯೋಗಾಲಯ ಮೂಡಿಬಂದಿದೆ.

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99