ಫರಂಗಿಪೇಟೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ ಪ್ರಕರಣ; ಮೂವರು ಅರೆಸ್ಟ್
Thursday, October 29, 2020
(ಗಲ್ಫ್ ಕನ್ನಡಿಗ)ಮಂಗಳೂರು; ಫರಂಗಿಪೇಟೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ, ಪೊಟೋಗ್ರಾಫರ್ ಮೇಲೆ ತಲವಾರು ದಾಳಿ ನಡೆಸಿದ ಮೂವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
(ಗಲ್ಫ್ ಕನ್ನಡಿಗ)ಮುಹಮ್ಮದ್ ಅರ್ಷದ್, ಅಬ್ದುಲ್ ರೆಹಮಾನ್, ಮುಹಮ್ಮದ್ ಸೈಫುದ್ದೀನ್ ಬಂಧಿತರು.
(ಗಲ್ಫ್ ಕನ್ನಡಿಗ)ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ರವರ ತೃಷಾ ಪೋಟೊ ಸ್ಟುಡಿಯೋಕ್ಕೆ 4 ಜನ ಯುವಕರು ಪೋಟೊ ತೆಗೆಸುವಂತೆ ಬಂದು ಪೊಟೋಗ್ರಾಫರ್,ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಅವರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು .
(ಗಲ್ಫ್ ಕನ್ನಡಿಗ)ಇತ್ತೀಚೆಗೆ ಕುಂಪನಮಜಲು ಎಂಬಲ್ಲಿ ಹೆಣ್ಣು ಮಗುವಿನ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಿನೇಶ್ ರವರು ಹೆಣ್ಣು ಮಗುವಿನ ಕಡೆಯವರಿಗೆ ಬೆಂಬಲ ನೀಡಿದ್ದ ದ್ವೇಷದಿಂದ ಈ ಹಲ್ಲೆ ನಡೆದಿದೆ.
(ಗಲ್ಫ್ ಕನ್ನಡಿಗ)ದಿನೇಶ್ ಅವರನ್ನು ಕೊಲ್ಲುವ ಉದ್ದೇಶದಿಂದ ಕತ್ತಿಯಿಂದ ತಲೆಗೆ,ಬಲ ಕೈಗೆ ಹಾಗೂ ಎಡ ಕಿಬ್ಬೊಟ್ಟೆಗೆ ಹಲ್ಲೆ ನಡೆಸಿ ತೀವ್ರ ಗಾಯವಾಗಿದ್ದು,ಆ ವೇಳೆಯಲ್ಲಿ ಅಲ್ಲಿದ್ದ ಶೇಖರ ಪೂಜಾರಿ ರವರು ಹಲ್ಲೆಯಾಗುವುದನ್ನು ತಪ್ಪಿಸಲು ಅಲ್ಲೇ ಇದ್ದ ಚೇರ್ ನಿಂದ ಜೋರಾಗಿ ಇಬ್ಬರು ಆರೋಪಿಗಳಿಗೆ ಹೊಡೆದಿದ್ದು ಅವರ ಕೈಗೆ ಗಾಯವಾಗಿರುತ್ತದೆ,ನಂತರ ದಿನೇಶ್ ರವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
(ಗಲ್ಫ್ ಕನ್ನಡಿಗ)ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು
ಕೂಡಲೇ ಆರೋಪಿಗಳಾದ ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19),ಅಬ್ದುಲ್ ರೆಹಮಾನ್(22) ಮತ್ತು ಮಹಮ್ಮದ್ ಸೈಪುದ್ದೀನ್(22) ರವರನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಪ್ರಸನ್ನ ಹಾಗೂ ಸಿಬ್ಬಂದಿರವರು ಬಂಧಿಸಿದ್ದಾರೆ.
(ಗಲ್ಫ್ ಕನ್ನಡಿಗ) ಮತ್ತೊಬ್ಬ ಆರೋಪಿ ಸವಾದ್ ನ ಬಂಧನಕ್ಕೆ ವಿಶೇಷ ತಂಡವು ಶೋಧ ನಡೆಸುತ್ತಿದೆ.
(ಗಲ್ಫ್ ಕನ್ನಡಿಗ)