ಸ್ನಾತಕೋತ್ತರ ವಿದ್ಯಾರ್ಥಿನಿ ಅಪಹರಣ ಪ್ರಕರಣ: ಆರೋಪಿಗೆ ನಿರೀಕ್ಷಣಾ ಜಾಮೀನು
Monday, October 19, 2020
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯ ಅಪಹರಣ ಪ್ರಕರಣದ ಆರೋಪಿಗೆ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
ಘಟನೆಯ ವಿವರ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂತಿಮ ವರ್ಷದ ಎಂ.ಎಸ್ಸಿ. ಸ್ನಾತಕೋತ್ತರ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯ ಅಪಹರಣ ಪ್ರಕರಣ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ನೀಡಿದ ದೂರಿನ ಅನ್ವಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.
ಈ ಮಧ್ಯೆ, ಆರೋಪಿ ಮಡಿಕೇರಿ ನಿವಾಸಿ ಮುರಳಿರಾಜ್ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆರೋಪಿ ಪರ ವಾದ ಆಲಿಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಪಲ್ಲವಿ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.
ಆರೋಪಿ ಪರ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ವಾದ ಮಂಡಿಸಿದ್ದರು.