
ಪ್ರೀತಿಗೆ ವಿರೋಧ; ಸುಳ್ಯದಲ್ಲಿ ಆತ್ಮಹತ್ಯೆ ಶರಣಾದ ಯುವ ಜೋಡಿ
(ಗಲ್ಫ್ ಕನ್ನಡಿಗ)ಮಂಗಳೂರು; ತಮ್ಮ ಪ್ರೀತಿಗೆ ಮನೆಯವರ ವಿರೋಧದ ಕಾರಣಕ್ಕೆ ಯುವಜೋಡಿಗಳು ಸುಳ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
(ಗಲ್ಫ್ ಕನ್ನಡಿಗ)ಸುಳ್ಯ ತಾಲೂಕಿನ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನಾರ್ಯ ಕಲ್ಕಜೆಯ ಶೇಷಪ್ಪ ಎಂಬವರ ಪುತ್ರಿ ಇಂದಿರಾ ಆತ್ಮಹತ್ಯೆ ಮಾಡಿಕೊಂಡವರು.
(ಗಲ್ಫ್ ಕನ್ನಡಿಗ)ಇವರಿಬ್ಬರು ಕೆಲ ಸಮಯಗಳಿಂದ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ಪ್ರೀತಿ ವಿಚಾರ ಗೊತ್ತಾಗಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ನೊಂದ ಜೋಡಿಗಳು ಸುಳ್ಯ ನಗರದ ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
(ಗಲ್ಫ್ ಕನ್ನಡಿಗ)