-->

 ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಮಂಗಳೂರು: ಡಿ ಕೆ ಶಿವಕುಮಾರ್ ಮನೆಗೆ ಸಿಬಿಐ ದಾಳಿ ನಡೆದ ಬಳಿಕ ಹಲವಾರು ಬೆಳವಣಿಗೆಗೆಗಳು ನಡೆದಿದೆ. ಈ ಹಿನ್ನೆಲೆಯಲ್ಲಿ ಬಿಜೆಇ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಟ್ವೀಟ್ ಮಾಡಿದ್ದು ಹೀಗೆ...(ಗಲ್ಪ್ ಕನ್ನಡಿಗ)ಡಿಕೆಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಈಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ. ಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ?(ಗಲ್ಪ್ ಕನ್ನಡಿಗ)ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು ಅವರು ಪರೋಕ್ಷವಾಗಿ

@DKShivakumar

ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯೆಂದು ತೋರಿಸಿದಂತೆ ಆಗಿದೆ!


(ಗಲ್ಪ್ ಕನ್ನಡಿಗ)ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ #CBI ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ!!


(ಗಲ್ಪ್ ಕನ್ನಡಿಗ)Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99