ತೊಕ್ಕೊಟ್ಟುವಿನಲ್ಲಿ ನಡೆದ ಭೀಕರ ಅಪಘಾತಕ್ಕೆ ನವದಂಪತಿ ಸಾವು
Tuesday, October 27, 2020
(ಗಲ್ಫ್ ಕನ್ನಡಿಗ)ಮಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸ ಭೀಕರ ಅಪಘಾತ ಸಂಭವಿಸಿ ನವದಂಪತಿಗಳು ಸಾವನ್ನಪ್ಪಿರುವ ಘಟನೆ ಮಂಗಳೂರಿನ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.
(ಗಲ್ಫ್ ಕನ್ನಡಿಗ)ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (30) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಮೃತಪಟ್ಟವರು. ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳುವ ವೇಳೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಈ ಅಪಘಾತ ಸಂಭವಿಸಿದೆ.
(ಗಲ್ಫ್ ಕನ್ನಡಿಗ)ದಂಪತಿ ಇದ್ದ ಬೈಕ್ ಉಳ್ಳಾಲ ಕಡೆಗೆ ತಿರುಗುವ ಸಂದರ್ಭ ಅತಿ ವೇಗವಾಗಿ ತೊಕ್ಕೊಟ್ಟು ಫ್ಲೈಓವರ್ ಮೂಲಕ ಬಂದ ಲಾರಿ ಢಿಕ್ಕಿ ಹೊಡೆದು, ಇಬ್ಬರ ಮೇಲೂ ಚಲಿಸಿ ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ.
(ಗಲ್ಫ್ ಕನ್ನಡಿಗ) ಅಪಘಾತದ ಭೀಕರತೆಗೆ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ.
(ಗಲ್ಫ್ ಕನ್ನಡಿಗ)