ಲವ್ ಜೆಹಾದ್, ಗೋಹತ್ಯೆ ನಿಷೇಧಕ್ಕೆ ಕಠಿಣ ಕಾನೂನು; ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ video
Thursday, November 5, 2020
(ಗಲ್ಫ್ ಕನ್ನಡಿಗ)ಮಂಗಳೂರು; ಲವ್ ಜೆಹಾದ್, ಗೋಹತ್ಯೆ ನಿಷೇಧಕ್ಕೆ ಕಠಿಣ ಕಾನೂನನ್ನು ರಾಜ್ಯ ಸರಕಾರ ಜಾರಿಗೊಳಿಸಬೇಕೆಂದು ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
(ಗಲ್ಫ್ ಕನ್ನಡಿಗ)ಮಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರವಿಂದ ಲಿಂಬಾವಳಿ ಅವರು ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮಕ್ಕೆ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದೆ.ರಾಜ್ಯದಲ್ಲಿ ಕಠಿಣ ಕಾನೂನು ಶೀಘ್ರ ಜಾರಿಯಾಗಲಿದೆ.ಪಕ್ಷದ ಮುಖಂಡರು, ಸಚಿವ ಸಂಪುಟದ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
(ಗಲ್ಫ್ ಕನ್ನಡಿಗ)ಗೋಹತ್ಯೆ ನಿಷೇಧ ಬಗ್ಗೆಯೂ ಕೋರ್ ಕಮಿಟಿಯಲ್ಲಿ ನಿರ್ಧಾರ ಮಾಡಲಾಗಿದ್ದು ಈ ಹಿಂದೆ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಜಾರಿ ತಂದಿತ್ತು.ಸಿದ್ದರಾಮಯ್ಯ ಸರಕಾರ ಅದನ್ನು ರದ್ದುಗೊಳಿಸಿತ್ತು.ಅದಕ್ಕೆ ಒಂದಿಷ್ಟು ತಿದ್ದುಪಡಿ ನಡೆಸಿ ಇನ್ನಷ್ಟು ಕಠಿಣ ಕಾನೂನಿಗೆ ನಿರ್ಧಾರ ಮಾಡಲಾಗಿದೆ ಎಂದರು.
(ಗಲ್ಫ್ ಕನ್ನಡಿಗ)ಬಿಜೆಪಿಯಲ್ಲಿ ಸಿಎಂ ಬದಲಾವಣೆ ಚರ್ಚಾ ವಿಷಯವಲ್ಲ.ಅದು ಸಿದ್ದರಾಮಯ್ಯನವರಿಗೆ ಮಾತ್ರ ಸೀಮಿತ.ಕೋರ್ ಕಮಿಟಿ ಸಭೆಯಲ್ಲಿ ಎಲ್ಲೂ ಚರ್ಚೆ ನಡೆಸಿಲ್ಲ.ಸಿಎಂ ಆಗಿ ಯಡಿಯೂರಪ್ಪನವರೇ ಮುಂದುವರಿಯುತ್ತಾರೆ ಎಂದವರು ತಿಳಿಸಿದರು.
(ಗಲ್ಫ್ ಕನ್ನಡಿಗ)